ಕುಶಾಲನಗರ, ಡಿ. 8: ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಕೆಲವು ಡೋಂಗಿ ಪರಿಸರವಾದಿಗಳು ಅಡ್ಡಿಪಡಿ ಸುತ್ತಿದ್ದಾರೆ ಎಂದು ಆರೋಪಿಸಿ ಕುಶಾಲನಗರದ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಶನಿವಾರ ಪ್ರತಿಭಟನೆ ನಡೆಸಿದರು. ಚೇಂಬರ್ ಆಫ್ ಕಾಮರ್ಸ್ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ನಕಲಿ ಪರಿಸರ ವಾದಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.ಅಭಿವೃದ್ಧಿ ಕಾಮಗಾರಿಗಳಿಗೆ ವಿನಾಕಾರಣ ಅಡ್ಡಿಪಡಿಸುವ ಹಿನ್ನೆಲೆ ಯಲ್ಲಿ ಜಿಲ್ಲೆ ಅಭಿವೃದ್ಧಿ ಹೊಂದುತ್ತಿಲ್ಲ. ಅಭಿವೃದ್ಧಿ ಕಾಮಗಾರಿಗಳ ವಿರುದ್ಧವಾಗಿ ಇಲ್ಲಸಲ್ಲದ ಗುಲ್ಲು ಎಬ್ಬಿಸಿ ಸರಕಾರದ ದಾರಿ ತಪ್ಪಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾಗೇಂದ್ರ ಪ್ರಸಾದ್ ಮಾತನಾಡಿ,

(ಮೊದಲ ಪುಟದಿಂದ) ಕೆಲವು ನಕಲಿ ಪರಿಸರವಾದಿಗಳು ರಾಜ್ಯ ಹೆದ್ದಾರಿ ಅಗಲೀಕರಣಗೊಂಡರೆ ರಸ್ತೆ ಬದಿಯ ಮರಗಳು ಕಣ್ಮರೆ ಆಗುತ್ತದೆ, ಪರಿಸರಕ್ಕೆ ಧಕ್ಕೆ ಉಂಟಾಗುತ್ತದೆ ಎಂದು ಸುಳ್ಳು ಹೇಳುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ತೊಡಕು ಉಂಟು ಮಾಡುತ್ತಿದ್ದಾರೆ. ಇಂಥವರ ವಿರುದ್ಧ ಹೋರಾಟ ಮಾಡುವ ಅನಿವಾರ್ಯ ಇದೆ ಎಂದರು.

ವಿ.ಪಿ.ಶಶಿಧರ್ ಮಾತನಾಡಿ, ರಸ್ತೆಗಳು ಅಭಿವೃದ್ಧಿಗೊಂಡಲ್ಲಿ ದೇಶ ಅಭಿವೃದ್ಧಿ ಸಾಧ್ಯ. ರಾಜ್ಯ ಹೆದ್ದಾರಿ ವಿಸ್ತರಣೆಗೆ ಕೇಂದ್ರ ಸರಕಾರ ಅಗತ್ಯ ಕ್ರಮಕೈಗೊಂಡಿದ್ದು ನಕಲಿ ಪರಿಸರ ವಾದಿಗಳು ಅಡ್ಡಗಾಲು ಹಾಕುತ್ತಿದ್ದಾರೆ. ಇಂತಹವರ ವಿರುದ್ದ ಬೀದಿಗಿಳಿದು ಹೋರಾಟ ಮಾಡುವದು ಅನಿವಾರ್ಯ ಎಂದರು.

ಪ್ರತಿಭಟನೆಯಲ್ಲಿ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಅಮೃತ್‍ರಾಜ್, ಪಪಂ ಸದಸ್ಯ ಪ್ರಮೋದ್ ಮುತ್ತಪ್ಪ, ಸಂಘಸಂಸ್ಥೆಗಳ ಪ್ರಮುಖರಾದ ಜಿ.ಎಲ್.ನಾಗರಾಜ್, ಮಂಜುನಾಥ್ ಗುಂಡೂರಾವ್, ಎಂ.ವಿ. ಸತ್ಯನಾರಾಯಣ, ವಿ.ಪಿ.ನಾಗೇಶ್, ಉಮಾಶಂಕರ್ ಮತ್ತಿತರರು ಇದ್ದರು.