ಕುಶಾಲನಗರ, ಡಿ. 7: ದಲಿತ ಸಂಘರ್ಷ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 62ನೇ ಪರಿನಿರ್ವಾಣ ದಿನಾಚರಣೆಯನ್ನು ಆಚರಿಲಾಯಿತು.

ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಪಂಚಾಯಿತಿ ಸದಸ್ಯ ಕೇಶವ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಮಾಜದ ನ್ಯೂನತೆಗಳನ್ನು ಸರಿಪಡಿಸಿ ಇಡೀ ಪ್ರಪಂಚಕ್ಕೆ ಮಾದರಿಯಾದ ಸಂವಿಧಾನವನ್ನು ನೀಡಿದ ಡಾ. ಬಿ.ಆರ್. ಅಂಬೇಡ್ಕರ್ ಒಂದು ಸಮುದಾಯಕ್ಕೆ ಸೀಮಿತವಾದ ನಾಯಕರಲ್ಲ ಎಂದರು.

ಸ್ಥಳೀಯ ಮುಖಂಡ ಮಹದೇವ್ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾರ್ಗದರ್ಶನದಲ್ಲಿ ಪ್ರತಿಯೊಬ್ಬರೂ ನಡೆಯಬೇಕಾಗಿದೆ ಎಂದರು.

ಅಂಬೇಡ್ಕರ್ ಸಂಘದ ಅಧ್ಯಕ್ಷ ಕೀರ್ತಿರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದಲ್ಲಿ ಡಿಎಸ್‍ಎಸ್ ಜಿಲ್ಲಾಧ್ಯಕ್ಷ ಕೆ.ಬಿ ರಾಜು, ಸ್ಥಳೀಯರಾದ ಜಯಪ್ರಕಾಶ್, ಶಿವರಾಜ್ ಮತ್ತಿತರರು ಇದ್ದರು

ಮಾದರಿಯಾದ ಸಂವಿಧಾನವನ್ನು ನೀಡಿದ ಡಾ. ಬಿ.ಆರ್. ಅಂಬೇಡ್ಕರ್ ಒಂದು ಸಮುದಾಯಕ್ಕೆ ಸೀಮಿತವಾದ ನಾಯಕರಲ್ಲ ಎಂದರು.

ಸ್ಥಳೀಯ ಮುಖಂಡ ಮಹದೇವ್ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾರ್ಗದರ್ಶನದಲ್ಲಿ ಪ್ರತಿಯೊಬ್ಬರೂ ನಡೆಯಬೇಕಾಗಿದೆ ಎಂದರು.

ಅಂಬೇಡ್ಕರ್ ಸಂಘದ ಅಧ್ಯಕ್ಷ ಕೀರ್ತಿರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದಲ್ಲಿ ಡಿಎಸ್‍ಎಸ್ ಜಿಲ್ಲಾಧ್ಯಕ್ಷ ಕೆ.ಬಿ ರಾಜು, ಸ್ಥಳೀಯರಾದ ಜಯಪ್ರಕಾಶ್, ಶಿವರಾಜ್ ಮತ್ತಿತರರು ಇದ್ದರು.