ಸೋಮವಾರಪೇಟೆ, ಡಿ. 9: ಭಾರತೀಯ ಮಜ್ದೂರ್ ಸಂಘದ ವತಿಯಿಂದ ತಾ. 10 ರಂದು (ಇಂದು) ಪೂರ್ವಾಹ್ನ 10 ಗಂಟೆಗೆ ಸ್ಥಳೀಯ ಮಹಿಳಾ ಸಮಾಜದಲ್ಲಿ ಸದಸ್ಯರಿಗೆ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಸಿ.ವಿ. ಗಣೇಶ್ ತಿಳಿಸಿದ್ದಾರೆ.
ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಸದಸ್ಯರಿಗೆ ಗುರುತಿನ ಚೀಟಿ ವಿತರಿಸಲಿದ್ದು, ಅಧ್ಯಕ್ಷತೆಯನ್ನು ಕಟ್ಟಡ ನಿರ್ಮಾಣ ಮತ್ತು ಇತರ ಕಾಮಗಾರಿ ಮಜ್ದೂರ್ ಸಂಘದ ಅಧ್ಯಕ್ಷ ಸಿ.ಕೆ. ಮೋಹನ್ ವಹಿಸಲಿದ್ದಾರೆ. ಅತಿಥಿಗಳಾದ ಆರ್ಎಸ್ಎಸ್ನ ಜಿಲ್ಲಾ ಸಂಘಚಾಲಕ್ ಚಕ್ಕೇರ ಮನು, ಸಂಘದ ರಾಜ್ಯ ಉಪಾಧ್ಯಕ್ಷ ಯೋಗೇಂದ್ರ, ತಾ.ಪಂ. ಉಪಾಧ್ಯಕ್ಷ ಅಭಿಮನ್ಯುಕುಮಾರ್, ಸಂಘದ ಜಿಲ್ಲಾಧ್ಯಕ್ಷ ಸತೀಶ್, ಕಾರ್ಮಿಕ ಇಲಾಖಾ ನಿರೀಕ್ಷಕ ಮಹದೇವಸ್ವಾಮಿ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.