ಮಡಿಕೇರಿ, ಡಿ. 9: ಮೇಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ತಾಲೂಕು ಪಂಚಾಯಿತಿ ಸದಸ್ಯೆ ಕುಮುದ ರಶ್ಮಿ, ತಾ.ಪಂ. ಅಧ್ಯಕ್ಷೆ ಶೋಭಾ ಮೋಹನ್, ಗ್ರಾ.ಪಂ. ಅಧ್ಯಕ್ಷೆ ಜಯಂತಿ, ಉಪಾಧ್ಯಕ್ಷ ಕೆ.ಎಸ್. ಭೀಮಯ್ಯ, ಬಿ.ಜೆ.ಪಿ. ತಾಲೂಕು ಅಧ್ಯಕ್ಷ ತಳೂರು ಕಿಶೋರ್‍ಕುಮಾರ್, ತಾಲೂಕು ಕಾರ್ಯದರ್ಶಿ ಕೋಡಿರ ಪ್ರಸನ್ನ, ಮೇಕೇರಿ-ಬಿಳಿಗೇರಿ ಸ್ಥಾನೀಯ ಸಮಿತಿ ಅಧ್ಯಕ್ಷ ಚೋಂಡಿರ ಕಿರಣ್, ಗ್ರಾಮ ಪಂಚಾಯಿತಿ ಸದಸ್ಯರು, ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ರೀಕಂಠಯ್ಯ ಹಾಗೂ ಮೇಕೇರಿ-ಬಿಳಿಗೇರಿ ಗ್ರಾಮಸ್ಥರು ಹಾಜರಿದ್ದರು. ರೂ. 1.50 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಯಿತು.