ಕುಶಾಲನಗರ, ಡಿ. 9: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಕೊಡಗು ಜಿಲ್ಲಾ ಘಟಕದ ಆಶ್ರಯದಲ್ಲಿ ಸ್ಥಳೀಯ ರೈತ ಸಹಕಾರ ಭವನದಲ್ಲಿ ಹಮ್ಮಿಕೊಂಡಿದ್ದ ಕೊಡಗು ಜಿಲ್ಲಾಮಟ್ಟದ ಪ್ರೌಢಶಾಲಾ ಶಿಕ್ಷಕರ ಶೈಕ್ಷಣಿಕ ಸಮ್ಮೇಳನ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮ ಪಡಿಸುವ ಕುರಿತಾದ ಶೈಕ್ಷಣಿಕ ಕಾರ್ಯಗಾರದಲ್ಲಿ ವಿವಿಧ ಕ್ಷೇತ್ರಗಳ ಸಾಧಕ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.