ಗೋಣಿಕೊಪ್ಪ ವರದಿ: ಸಂವಿದಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರ 63 ನೇ ಮಹಾಪರಿನಿರ್ವಾಣ ದಿನವನ್ನು ಜಿಲ್ಲಾ ದಲಿತ ಸಂಘರ್ಷ ಸಮಿತಿ ವತಿಯಿಂದ ಇಲ್ಲಿನ ಗ್ರಾಮ ಪಂಚಾಯ್ತಿ ಸಭಾಂಗಣದಲ್ಲಿ ಆಚರಿಸಲಾಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಹಾಗೂ ಜ್ಯೋತಿ ಬೆಳಗಿಸಿ ಸಂವಿಧಾನ ಶಿಲ್ಪಿಯನ್ನು ನೆನೆಯಲಾಯಿತು.

ಈ ಸಂದರ್ಭ ದಸಂಸ ಜಿಲ್ಲಾ ಸಂಚಾಲಕ ಪರಶುರಾಮ್, ವಿಭಾಗೀಯ ಸಂಚಾಲಕ ಕೃಷ್ಣಪ್ಪ, ಜಿಲ್ಲಾ ಸಂಘಟನಾ ಸಂಚಾಲಕ ಸಿಂಗಿ ಸತೀಶ್, ಸುಬ್ರಮಣಿ, ಖಜಾಂಜಿ ಕುಮಾರ್ ಮಹಾದೇವ್, ವೀರಾಜಪೇಟೆ ತಾಲೂಕು ಸಂಚಾಲಕ ಕುಮಾರ್, ಸಾಂಸ್ಕøತಿಕ ಸಮಿತಿಯ ಸಂಚಾಲಕ ಗಿರೀಶ್ ಸೇರಿದಂತೆ ಸಂಘಟನೆಯ ಪ್ರಮುಖರು ಪಾಲ್ಗೊಂಡು ಅಂಬೇಡ್ಕರ್ ದೇಶಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.