ಕುಶಾಲನಗರ, ಡಿ 10: ಕುಶಾಲನಗರ ಮೂಕಾಂಬಿಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಅಶ್ವಿತ ಮತ್ತು ಜಿ ಚೈತ್ರ ರಾಜ್ಯಮಟ್ಟದ ಹ್ಯಾಂಡ್‍ಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪಪೂ ಶಿಕ್ಷಣ ಇಲಾಖೆ ವತಿಯಿಂದ ಗುಲ್ಬರ್ಗದಲ್ಲಿ ನಡೆದ ಕಾಲೇಜು ಮಟ್ಟದ ಹ್ಯಾಂಡ್‍ಬಾಲ್ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲೆ ತಂಡವನ್ನು ಪ್ರತಿನಿಧಿಸಿದ ಬಾಲಕಿಯರು ವಿಜೇತರಾಗಿ ಪ್ರಥಮ ಸ್ಥಾನ ಪಡೆದಿದ್ದಾರೆ.