ನಾಪೆÇೀಕ್ಲು, ಡಿ. 10: ನಾಪೆÇೀಕ್ಲು ಮಹಿಳಾ ಸಮಾಜದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ಪುನಶ್ಚೇತನ ಚಾರಿಟೇಬಲ್ ಟ್ರಸ್ಟ್‍ನ ವತಿಯಿಂದ ವಿಶ್ವ ವಿಶೇಷಚೇತನ ದಿನಾಚರಣೆ ಹಾಗೂ ಟ್ರಸ್ಟ್‍ನ ವಾರ್ಷಿಕೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ಉದ್ಘಾಟಿಸಿದರು. ಈ ಸಂದರ್ಭ ದಲ್ಲಿ ಟ್ರಸ್ಟ್‍ನ ಅಧ್ಯಕ್ಷೆ ಬಾಳೆಯಡ ದಿವ್ಯಾ ಮಂದಪ್ಪ, ಬೊಪ್ಪಂಡ ಸೂರಜ್, ಪಾಂಡಂಡ ಶಂಭು, ಗ್ರಾಮ ಪಂಚಾಯಿತಿ ಸದಸ್ಯೆ ಲುದಿಯಾನಾ ಇದ್ದರು. ಇದರ ಪ್ರಯುಕ್ತ ಮಕ್ಕಳಿಗೆ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ವನ್ನು ವಿತರಿಸಲಾಯಿತು. ನಂತರ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.