ಸೋಮವಾರಪೇಟೆ,ಡಿ.10 : ಜಿಲ್ಲಾ ಕಸಾಪ, ಸೋಮವಾರಪೇಟೆ ತಾಲೂಕು ಮತ್ತು ಕೊಡ್ಲಿಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್, ಕಿರಿಕೊಡ್ಲಿ ಮಠದ ಎಸ್‍ಜಿಎಸ್ ವಿದ್ಯಾಪೀಠ ಇವುಗಳ ವತಿಯಿಂದ ಎಸ್‍ಜಿಎಸ್ ವಿದ್ಯಾಪೀಠದಲ್ಲಿ ಆಯೋಜಿಸಲಾಗಿದ್ದ ಮಕ್ಕಳ 2ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಾಂಸ್ಕøತಿಕ ಕಾರ್ಯಕ್ರಮ ಸಂಭ್ರಮಕ್ಕೆ ಸಾಕ್ಷಿಯಾಯಿತು.
ಕೊಡ್ಲಿಪೇಟೆ ವ್ಯಾಪ್ತಿಯ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಮೂಡಿಬಂದ ನೃತ್ಯರೂಪಕಗಳು ಮೆಚ್ಚುಗೆಗೆ ಪಾತ್ರವಾದವು. ಕನ್ನಡ ಭಾಷೆ, ನಾಡು, ಸಂಸ್ಕøತಿ, ಆಚಾರ ವಿಚಾರಗಳನ್ನು ಸಾರುವ ಚಿತ್ರಗೀತೆ, ಭಾವಗೀತೆ, ಜಾನಪದ ಗೀತೆಗಳಿಗೆ ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು.
ಕೊಡ್ಲಿಪೇಟೆ ಸುತ್ತಮುತ್ತಲಿನ ಸಾವಿರಾರು ಮಂದಿ ಕನ್ನಡಾಭಿಮಾನಿಗಳು ಸಾಂಸ್ಕøತಿಕ ಕಾರ್ಯಕ್ರಮವನ್ನು ವೀಕ್ಷಿಸಿ ವಿದ್ಯಾರ್ಥಿಗಳ ನೃತ್ಯಕ್ಕೆ ಚಪ್ಪಾಳೆ ಮೂಲಕ ಪ್ರೋತ್ಸಾಹಿಸಿದರು. ಕಾರ್ಯಕ್ರಮ ನೀಡಿದ ಎಲ್ಲಾ ವಿದ್ಯಾರ್ಥಿಗಳಿಗೂ ಸ್ಮರಣಿಕೆ ನೀಡಲಾಯಿತು.
ಸಮ್ಮೇಳನದ ಸಾಂಸ್ಕøತಿಕ ಸಮಿತಿ ಅಧ್ಯಕ್ಷ ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕೊಡ್ಲಿಪೇಟೆ ಕ್ಲಸ್ಟರ್‍ನ ಸಂಪನ್ಮೂಲ ವ್ಯಕ್ತಿ ಸುರೇಶ್ ಸೇರಿದಂತೆ ಇತರ ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.