ಮಡಿಕೇರಿ, ಡಿ. 11: ಬೆಂಗಳೂರಿನ ಆಚಾರ್ಯ ಪಾಠ ಶಾಲಾ ಶಿಕ್ಷಣ ದತ್ತಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬೋಧನಾ ಕೊಠಡಿಗಳು ಕಂಪ್ಯೂಟರ್ ಲ್ಯಾಬ್ ನಿರ್ಮಾಣಕ್ಕಾಗಿ ತಾ. 12 ರಂದು (ಇಂದು) ಬೆಳಗ್ಗೆ 10.30 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಭೂಮಿ ಪೂಜಾ ಸಮಾರಂಭ ನಡೆಯಲಿದೆ.

ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಬೆಂಗಳೂರು ಆಚಾರ್ಯ ಪಾಠಶಾಲಾ ಶಿಕ್ಷಣ ದತ್ತಿ ಅಧ್ಯಕ್ಷ ಟಿ.ವಿ.ಮಾರುತಿ, ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ರಾಜೀವ್ ಗಾಂಧಿ ಗೃಹ ನಿರ್ಮಾಣ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ವಸತಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಮುಖ್ಯ ಕಾರ್ಯದರ್ಶಿ ಅನ್ಬುಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ಕೆಂಚಪ್ಪ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎ.ಪಿ.ಧನಂಜಯ್ ಇತರರು ಪಾಲ್ಗೊಳ್ಳಲಿದ್ದಾರೆ.