ಮಡಿಕೇರಿ, ಡಿ. 11: ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ತಾ. 13 ರಂದು ಶ್ರೀ ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ ಬೆಳಗ್ಗೆ 7.30 ಗಂಟೆಯಿಂದ ಶ್ರೀ ಓಂಕಾರೇಶ್ವರ ದೇವರಿಗೆ ರುದ್ರಾಭಿಷೇಕ ಸೇವೆ, ಪಂಚಾಮೃತಾಭಿಷೇಕ ಸೇವೆ, ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ಕ್ಷೀರಾಭಿಷೇಕ ಸೇವೆಗಳು ನಡೆಯಲಿವೆ. ಮಧ್ಯಾಹ್ನ 12.30 ಗಂಟೆಯಿಂದ ಮಹಾ ಮಂಗಳಾರತಿ, ತೀರ್ಥಪ್ರಸಾದ ವಿತರಣೆ, ಬಳಿಕ 1 ಗಂಟೆಯ ನಂತರ ಅನ್ನಸಂತರ್ಪಣೆ ನಡೆಯಲಿವೆ. ಸಂಜೆ 7 ಗಂಟೆಗೆ ತೆಪ್ಪೋತ್ಸವ, ಪಲ್ಲಕ್ಕಿ ಉತ್ಸವಗಳು ನಡೆಯಲಿದೆ.