ಗುಡ್ಡೆಹೊಸೂರು, ಡಿ. 11: ಇಲ್ಲಿಗೆ ಸಮೀಪದ ಬಸವನಹಳ್ಳಿ ಗ್ರಾಮದ ಶ್ರೀಬಸವೇಶ್ವರ, ಶ್ರೀ ಚಾಮುಂಡೇಶ್ವರಿ,ಶ್ರೀಗಣಪತಿ ದೇವಸ್ಥಾನ ಸಮಿತಿ ವತಿಯಿಂದ ಕೊನೆಯ ಕಾರ್ತಿಕ ಪೂಜೆಯು ಭಕ್ತಿಭಾವದಿಂದ ಆಚರಿಸಲಾಯಿತು. ಮೂರು ಗುಡಿಯಲ್ಲಿಯೂ ಸಾವಿರಾರು ದೀಪ ಬೆಳಗಿಸಲಾಗಿತ್ತು.
ಈ ಸಂದರ್ಭ ದೇವಸ್ಥಾನ ಸಮಿತಿಯ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು. ಮೊರಾರ್ಜಿ ವಸತಿ ಶಾಲೆಯ ಮಕ್ಕಳು ಈ ಪೂಜಾಕಾರ್ಯದಲ್ಲಿ ಪಾಲ್ಗೊಂಡಿದ್ದರು. ದೇವಸ್ಥಾನ ಸಮಿತಿ ವತಿಯಿಂದ ಅನ್ನಸಂತರ್ಪಣೆ ನಡೆಯಿತು.