ಕುಶಾಲನಗರ, ಡಿ. 11: ಪಂಚ ರಾಜ್ಯಗಳ ಚುನಾವಣೆಯಲ್ಲಿ 3 ರಾಜ್ಯಗಳಲ್ಲಿ ಕಾಂಗ್ರೆಸ್ ಜಯಭೇರಿ ಗಳಿಸಿದ ಹಿನ್ನೆಲೆಯಲ್ಲಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.
ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ನರೇಂದ್ರ ಮೋದಿ ಅವರ ಸರ್ವಾಧಿಕಾರಿ ಧೋರಣೆಯಿಂದ ಜನತೆಗೆ ಕಾಂಗ್ರೆಸ್ನ ಅಧಿಕಾರ ಅನಿವಾರ್ಯ ಎನಿಸಿದೆ. ದೇಶದ ಅಖಂಡತೆ ಪ್ರತಿಪಾದಿಸುವ ಪಕ್ಷ ಕಾಂಗ್ರೆಸ್ ಎಂದು ಅರಿತ ಮತದಾರರು ಬಿಜೆಪಿಯನ್ನು ಸೋಲಿಸಿದ್ದಾರೆ. ಮುಂದಿನ ಲೋಕಸಭಾ ಚುನಾಣೆಗಳಲ್ಲೂ ಕೂಡ ಬಿಜೆಪಿ ಧೂಳೀಪಟ ವಾಗಲಿದೆ ಎಂದರು.
ಕಾಂಗ್ರೆಸ್ ಪ್ರಮುಖರಾದ ಬಿ.ಜಿ.ಮಂಜುನಾಥ್, ಫಜಲುಲ್ಲಾ, ಎಸ್.ಎನ್. ನರಸಿಂಹಮೂರ್ತಿ, ಜೋಸೆಫ್ ವಿಕ್ಟರ್ ಸೋನ್ಸ್, ಪಪಂ ಸದಸ್ಯರಾದ ಪ್ರಮೋದ್ ಮುತ್ತಪ್ಪ, ಖಲೀಮುಲ್ಲಾ, ದಿನೇಶ್ ಮತ್ತಿತರರು ಇದ್ದರು.