ನಾಪೆÉÇೀಕ್ಲು, ಡಿ. 11: ತೋಟಗಾರಿಕಾ ಉತ್ಪನ್ನಗಳಾದ ಹಣ್ಣು ಮತ್ತು ತರಕಾರಿ ಸಂರಕ್ಷಣೆ ಬಗ್ಗೆ ನಾಪೆÇೀಕ್ಲು ಭಗವತಿ ಮಹಿಳಾ ಸಮಾಜದಲ್ಲಿ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು.

ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ನಮ್ಮಲ್ಲಿ ಬೆಳೆಯುವ ಹಣ್ಣು ತರಕಾರಿಗಳ ಸಂರಕ್ಷಣೆಗೆ ರಾಜ್ಯ ಸರಕಾರ, ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯಿತಿ, ಮಡಿಕೇರಿ ತಾಲೂಕು ಪಂಚಾಯಿತಿ ಯೋಜನೆಯಡಿಯಲ್ಲಿ ಕ್ರಮ ಕೈಗೊಂಡಿದ್ದು, ಇದರ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳುವಂತೆ ಕರೆ ನೀಡಿದರು.

ತೋಟಗಾರಿಕೆ ಇಲಾಖೆಯಲ್ಲಿ ಸಬ್ಸಿಡಿ ದರದಲ್ಲಿ ಹಣ್ಣಿನ ಗಿಡಗಳನ್ನು ವಿತರಿಸಲಾಗುತ್ತಿದ್ದು, ರೈತರು ಆರ್.ಟಿ.ಸಿ. ನೀಡಿ ಪಡೆದುಕೊಳ್ಳವಂತೆ ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ, ಅರೆಯಡ ಡಿ. ಸೋಮಪ್ಪ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಗವತಿ ಮಹಿಳಾ ಸಮಾಜದ ಅಧ್ಯಕ್ಷೆ ಕೇಲೇಟಿರ ಚಿತ್ರಾ ನಾಣಯ್ಯ ಮಾತನಾಡಿದರು.

ವೇದಿಕೆಯಲ್ಲಿ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಕೆ.ಎಸ್. ಚಂದ್ರಶೇಖರ್, ಸಹಾಯಕ ಅಧಿಕಾರಿ ರಾಮದಾಸ್, ಗೌರಮ್ಮ, ಸ್ತ್ರೀ ಶಕ್ತಿ ಸಂಘದ ಸದಸ್ಯರು, ಮಹಿಳಾ ಸಮಾಜದ ಸದಸ್ಯರು ಇದ್ದರು.