ಕೂಡಿಗೆ, ಡಿ. 12: ಕುಶಾಲನಗರ ಹೋಬಳಿ ವ್ಯಾಪ್ತಿಯಲ್ಲಿ ಈಗಾಗಲೇ ಹಾರಂಗಿ ಅಚ್ಚಕಟ್ಟು ವ್ಯಾಪ್ತಿಯ ಶಿರಂಗಾಲ, ತೊರೆನೂರು, ಹೆಬ್ಬಾಲೆ, ಶನಿವಾರಸಂತೆ ಹೋಬಳಿ, ಕೊಡ್ಲಿಪೇಟೆ ಭಾಗಗಳಲ್ಲಿ ಭತ್ತವನ್ನು ಬೆಳೆದಿರುತ್ತಾರೆ.

ಆದರೆ ವರ್ಷಂಪ್ರತಿಯಂತೆ ಕೃಷಿ ಇಲಾಖೆಯ ಸಹಯೋಗದೊಂದಿಗೆ ನಾಗರಿಕ ಆಹಾರ ಸರಬರಾಜು ಇಲಾಖೆ ಜಂಟಿಯಾಗಿ ಭತ್ತ ಖರೀದಿ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿತ್ತು. ಆದರೆ ಈ ಸಾಲಿನಲ್ಲಿ ಖರೀದಿ ಕೇಂದ್ರ ತೆರೆದಿಲ್ಲ.

ಭತ್ತದ ಖರೀದಿ ಕೇಂದ್ರವನ್ನು ತೆರೆಯಬೇಕೆಂದು ಈ ಭಾಗದ ರೈತರು ಆಗ್ರಹಿಸಿದ್ದಾರೆ.