ಸೋಮವಾರಪೇಟೆ, ಡಿ. 11: ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ರೂ. 10 ಕೋಟಿ ವೆಚ್ಚದಲ್ಲಿ ಪ್ರಗತಿಯಲ್ಲಿರುವ ಹೊಸತೋಟ-ಗರಗಂದೂರು ರಸ್ತೆ ಕಾಮಗಾರಿಯನ್ನು ಹರದೂರು ಗ್ರಾ.ಪಂ. ಅಧ್ಯಕ್ಷೆ ಸುಮಾ ಪರಿಶೀಲಿಸಿದರು. ಹರದೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಗುಣಮಟ್ಟದಿಂದ ನಿರ್ವಹಿಸಬೇಕು ಎಂದು ಅಧ್ಯಕ್ಷರು, ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚಿಸಿದರು.