ಮಡಿಕೇರಿ, ಡಿ. 11: ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯು ತಾ. 15ರಂದು ಬೆಳಿಗ್ಗೆ 10 ಗಂಟೆಗೆ ಕೆಳಗಿನ ಗೌಡ ಸಮಾಜ, ಮಡಿಕೇರಿ ಇಲ್ಲಿ ಅರೆಭಾಷೆ ಸೌಹಾದರ್À ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಕಾರ್ಯಕ್ರಮ ಉದ್ಘಾಟಿಸಲಿದ್ದು, ಅಕಾಡೆಮಿ ಅಧ್ಯಕ್ಷ ಪಿ.ಸಿ. ಜಯರಾಮ ಅಧ್ಯಕ್ಷತೆ ವಹಿಸಲಿದ್ದಾರೆ. ಚಿಂತಕ, ಸಾಮಾಜಿಕ ಕಾರ್ಯಕರ್ತ ಗೋಪಾಲ ಪೆರಾಜೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಎನ್.ಎಸ್. ದೇವಿಪ್ರಸಾದ್, ಸಂಪಾಜೆ ಪ್ರಥಮ ಅಧ್ಯಕ್ಷರು, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕೊಲ್ಯದ ಗಿರೀಶ್, ನಿಕಟಪೂರ್ವ ಅಧ್ಯಕ್ಷರು, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಪೇರಿಯನ ಜಯಾನಂದ, ಅಧ್ಯಕ್ಷರು, ಕೊಡಗು ಗೌಡ ಸಮಾಜ, ಮಡಿಕೇರಿ ಹಾಗೂ ರಮೇಶ್ ಜೋಯಪ್ಪ, ಅಧ್ಯಕ್ಷರು, ಕೊಡಗು ಗೌಡ ವಿದ್ಯಾಸಂಘ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.