ಮಡಿಕೇರಿ, ಡಿ. 12: ಕರ್ನಾಟಕ ರಾಜ್ಯದ ಅಬಕಾರಿ ಇಲಾಖೆಯಲ್ಲಿನ ಅಬಕಾರಿ ಉಪನಿರೀಕ್ಷಕರ ಹುದ್ದೆಗಳು ಹಾಗೂ ಪೊಲೀಸ್ ಇಲಾಖೆಯಲ್ಲಿನ ಸಬ್ ಇನ್ಸ್‍ಪೆಕ್ಟರ್ ಹಾಗೂ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಗಳ ಕುರಿತಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ತಾ. 14 ರಿಂದ 21 ರವರೆಗೆ ಪರೀಕ್ಷಾ ಪೂರ್ವ ಉಚಿತ ತರಬೇತಿ ಕಾರ್ಯಕ್ರಮ ಮಡಿಕೇರಿಯಲ್ಲಿ ನಡೆಯಲಿದೆ.

ಪರೀಕ್ಷಾ ಪೂರ್ವ ತರಬೇತಿಯಲ್ಲಿ ಹುದ್ದೆಗಳಿಗೆ ನಿಗದಿಪಡಿಸಿರುವ ಪಠ್ಯಕ್ರಮಕ್ಕೆ ಅನುಗುಣವಾಗಿ ಗುಣಮಟ್ಟದ ತರಬೇತಿಯನ್ನು ನೀಡಲಾಗುವದು. ಪರೀಕ್ಷಾ ಪೂರ್ವ ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ತಮ್ಮ ಹೆಸರನ್ನು ಖುದ್ದಾಗಿ ಅಥವಾ ಅಂಚೆ ಕಾರ್ಡಿನ ಮುಖಾಂತರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಾಯಿಸಿ ಕೊಳ್ಳುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.