ಮಡಿಕೇರಿ, ಡಿ. 11: ಕೊಡಗು ಜಿಲ್ಲೆಯ ಪ್ರಕೃತಿ ವಿಕೋಪ ಪರಿಹಾರ ಹಾಗೂ ಷರತ್ತುಗಳಿಲ್ಲದೆ ಬೆಳೆ ಸಾಲ ಮನ್ನಾ ಕುರಿತು ಮನವಿಯನ್ನು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ. ಮಹೇಶ್ ಅವರಿಗೆ ಶಾಸಕ ಕೆ.ಜಿ. ಬೋಪಯ್ಯ ಸಮ್ಮುಖದಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ. ಮನು ಮುತ್ತಪ್ಪ ಸಲ್ಲಿಸಿದರು.

ಈ ಸಂದರ್ಭ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶರೂ ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಯೂನಿಯನ್ ನಿರ್ದೇಶಕರಾದ ಎನ್.ಎ. ರವಿಬಸಪ್ಪ, ಕೆ.ಎಂ. ತಮ್ಮಯ್ಯ, ಕನ್ನಂಡ ಸಂಪತ್ ಮತ್ತು ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ಉಪಸ್ಥಿತರಿದ್ದರು.