ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 62ನೇ ಪರಿನಿರ್ವಾಣ ಕಾರ್ಯಕ್ರಮ ನಡೆಯಿತು.

ಬಳಿಕ ಮಾತನಾಡಿದ ಜಿ.ಪಂ. ಉಪ ಕಾರ್ಯದರ್ಶಿ ಗುಡೂರು ಭೀಮಸೇನ ಅವರು, ಭಾರತ ಸಂವಿಧಾನಕ್ಕೆ ಸರಿ ಸಮಾನವಾದ ಸಂವಿಧಾನ ಜಗತ್ತಿನಲ್ಲಿ ಮತ್ತೊಂದು ಇಲ್ಲ. ಅಂತಹ ಶ್ರೇಷ್ಠ ಸಂವಿಧಾನ ರಚನೆ ಮಾಡಿದ ಮಹಾಪುರುಷ ಡಾ. ಬಿ.ಆರ್. ಅಂಬೇಡ್ಕರ್ ಎಂದರು.

ಸಮಾಜದ ಎಲ್ಲಾ ಸಮುದಾಯಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಮಹಾನ್ ಮಾನವತಾವಾದಿ ಡಾ. ಬಿ.ಆರ್. ಅಂಬೇಡ್ಕರ್. ಅವರ ದ್ಯೇಯೋದ್ದೇಶಗಳನ್ನು ಪಾಲಿಸಿ ಅಖಂಡ ಭಾರತ ನಿರ್ಮಾಣಕ್ಕೆ ಮುಂದಾಗೋಣ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶಿವಕುಮಾರ್, ತಹಶೀಲ್ದಾರ್ ಕುಸುಮ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆಂಚಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಚ್ಚಾಡೋ ಜಿ.ಪಂ. ಯೋಜನಾ ನಿರ್ದೇಶಕ ಬಾಬು, ಸಹಾಯಕ ಕಾರ್ಯದರ್ಶಿ ಶ್ರೀಕಂಠಮೂರ್ತಿ ಇತರರು ಇದ್ದರು.ಸೋಮವಾರಪೇಟೆ: ಇಲ್ಲಿನ ದಲಿತ ಸಂಘಟನೆಗಳ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ 62ನೇ ಪರಿನಿರ್ವಾಣ ದಿನವನ್ನು ಆಚರಿಸಲಾಯಿತು. ಬಾಣಾವರ ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಸಮಿತಿಯ ಪದಾಧಿಕಾರಿಗಳು ಮಾಲಾರ್ಪಣೆ ಮಾಡಿದರು.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶೇಖರ್ ಮಾತನಾಡಿ, ಮಹಾನ್ ಮಾನವತಾವಾದಿ, ಸಮಾಜ ಸುಧಾರಕರಾದ ಅಂಬೇಡ್ಕರ್ ಅವರ ಕೊಡುಗೆ ಅಪಾರ. ಅವರ ಕನಸಿನ ಭಾರತ ನಿರ್ಮಾಣದಲ್ಲಿ ಎಲ್ಲರೂ ಕೈಜೋಡಿಸಬೇಕು. ಅವರ ಮಾರ್ಗದರ್ಶನ, ತತ್ವಾದರ್ಶಗಳು ಸಾರ್ವಕಾಲಿಕ ಎಂದರು.

ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆಯ ಹಿರಿಯ ದಲಿತ ಮುಖಂಡ ಡಿ.ಸಿ. ನಿರ್ವಾಣಪ್ಪ ಮತ್ತು ಸಂಗಡಿಗರು ಅಂಬೇಡ್ಕರ್ ಕುರಿತ ಜಾಗೃತಿ ಗೀತೆಗಳನ್ನು ಹಾಡಿದರು.

ಈ ಸಂದರ್ಭ ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಯೋಜಕ ಜೆ.ಆರ್. ಪಾಲಾಕ್ಷ, ಪ್ರಮುಖರಾದ ಶಿವಶಂಕರ್, ರಾಜಪ್ಪ, ದೇವಮ್ಮ, ಟಿ.ಈ. ಸುರೇಶ್, ಜನಾರ್ಧನ್, ಮಹೇಶ್, ಹೂವಯ್ಯ, ಬ್ರಿಜೇಶ್, ಎಸ್.ಆರ್. ವಸಂತ ಉಪಸ್ಥಿತರಿದ್ದರು.ಗೋಣಿಕೊಪ್ಪಲು: ಡಾ. ಬಿ.ಆರ್. ಅಂಬೇಡ್ಕರ್ ಅವರ 63ನೇ ಮಹಾ ಪರಿನಿರ್ವಾಣ ದಿನವನ್ನು ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿ ವತಿಯಿಂದ ಇಲ್ಲಿನ ಹಳೇ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಚರಿಸಲಾಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಹಾಗೂ ಜ್ಯೋತಿ ಬೆಳಗಿಸಿ ಸಂವಿಧಾನ ಶಿಲ್ಪಿಯನ್ನು ನೆನೆಯಲಾಯಿತು.

ಈ ಸಂದರ್ಭ ದಸಂಸ ಜಿಲ್ಲಾ ಸಂಚಾಲಕ ಪರಶುರಾಮ್, ವಿಭಾಗೀಯ ಸಂಚಾಲಕ ಕೃಷ್ಣಪ್ಪ, ಜಿಲ್ಲಾ ಸಂಘಟನಾ ಸಂಚಾಲಕ ಸಿಂಗಿ ಸತೀಶ್, ಸುಬ್ರಮಣಿ, ಖಜಾಂಚಿ ಕುಮಾರ್ ಮಹಾದೇವ್, ವೀರಾಜಪೇಟೆ ತಾಲೂಕು ಸಂಚಾಲಕ ಕುಮಾರ್, ಸಾಂಸ್ಕøತಿಕ ಸಮಿತಿಯ ಸಂಚಾಲಕ ಗಿರೀಶ್ ಸೇರಿದಂತೆ ಸಂಘಟನೆಯ ಪ್ರಮುಖರು ಇದ್ದರು.ಶನಿವಾರಸಂತೆ: ಶನಿವಾರಸಂತೆ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣ ದಿನಾಚರಣೆ ಅಂಗವಾಗಿ ಅಂಬೇಡ್ಕರ್ ಕಟೌಟ್‍ಗೆ ಶನಿವಾರಸಂತೆ ಪೊಲೀಸ್ ಠಾಣೆಯ ಸಹಾಯಕ ಠಾಣಾಧಿಕಾರಿ ನಂಜುಂಡೇಗೌಡ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸೂಚಿಸಿದರು.

ಶನಿವಾರಸಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಮದ್ ಗೌಸ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಜೆ.ಆರ್. ಪಾಲಾಕ್ಷ ಮಾತನಾಡಿ, ಅಂಬೇಡ್ಕರ್ ಅವರ ಸಾಧನೆಗಳ ಬಗ್ಗೆ ತಿಳಿಸಿದರು. ನಂತರ ಸೋಮವಾರಪೇಟೆವರೆಗೆ ಬೈಕ್ ರ್ಯಾಲಿಯಲ್ಲಿ ತೆರಳಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮಧ್ಯಾಹ್ನ 1 ಗಂಟೆಗೆ ಶನಿವಾರಸಂತೆಯ ಸುಳುಗಳಲೆ ಗ್ರಾಮದ ಸಮುದಾಯ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಸ್ಮರಣೆ ದಿನದ ಬಗ್ಗೆ ನೆನೆಯಲಾಯಿತು.

ಕಾರ್ಯಕ್ರಮದಲ್ಲಿ ದ.ಸಂ.ಸ. ಬಳಗ ಹೋಬಳಿ ಘಟಕದ ಪದಾಧಿಕಾರಿಗಳಾದ ಎಂ.ಜಿ. ಶಿವಶಂಕರ್, ಎಸ್.ಜೆ. ರಾಜಪ್ಪ, ಎಸ್.ಎಸ್. ಶಿವಲಿಂಗ, ಎಸ್.ಕೆ. ಪುಟ್ಟಸ್ವಾಮಿ, ಮಂಜಪ್ಪ, ಗುರುಪ್ರಸಾದ್, ಜಗದೀಶ್, ಆದರ್ಶ್, ಜಯಣ್ಣ, ಶಿವ ಬೆಟ್ಟದಳ್ಳಿ, ನಾಗರಾಜ್ ಮೂದ್ರವಳ್ಳಿ, ಮೋಹನ್ ಇತರರು ಭಾಗವಹಿಸಿದ್ದರು.