ಸುಂಟಿಕೊಪ್ಪ, ಡಿ. 20: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಏರ್ಪಡಿಸ ಲಾಯಿತು. ಸುಂಟಿಕೊಪ್ಪ ಸರಕಾರಿ ಪ್ರೌಢಶಾಲಾ ಮಕ್ಕಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆಯೋಜಿಸಲಾಗಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ತರಬೇತುದಾರ ಡೆನ್ನೀಸ್ ಡಿಸೋಜ ಮಾತನಾಡಿ, ಸಮಾಜದಲ್ಲಿ ಅತೀ ಹೆಚ್ಚು ಯುವಕರೇ ಮದ್ಯಸೇವನೆ, ಧೂಮಪಾನ ಹಾಗೂ ಮಾದಕ ವಸ್ತುಗಳಿಗೆ ಆಕರ್ಷಿತ ರಾಗುತ್ತಿದ್ದಾರೆ. ಇದರಿಂದ ತಮ್ಮ ದೇಹ ಹಾಗೂ ಸಮಾಜದ ಸ್ವಾಸ್ಥ್ಯವನ್ನು ಕೆಡಿಸಿಕೊಳ್ಳುತ್ತಿರುವದು ವಿಷಾದನೀಯ. ಸಮಾರಂಭದಲ್ಲಿ ಸರ್ಕಾರಿ ಪ್ರೌಢಶಾಲಾ ಜಿಲ್ಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್ ಮಾತನಾಡಿ, ಯುವ ಪೀಳಿಗೆಗಳು ಮದ್ಯ ಹಾಗೂ ಮಾದಕ ವಸ್ತುಗಳಿಂದ ದೂರವಿರುವ ದರಿಂದ ಉತ್ತಮ ಆರೋಗ್ಯವನ್ನು ಹೊಂದಿಕೊಳ್ಳಲು ಸಾಧ್ಯವಾಗಲಿದೆ ಎಂದರು. ಸಮಾರಂಭದ ವೇದಿಕೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಕಾಂತಿಮಣಿ, ಒಕ್ಕೂಟದ ಅಧ್ಯಕ್ಷೆ ಸೆಲ್ವಿ ಸತೀಶ್, ಸೇವಾ ಪ್ರತಿನಿಧಿ ಚಿತ್ರಾ ಸುರೇಶ್ ಇದ್ದರು. ಈ ಸಂದರ್ಭ ಮಕ್ಕಳಿಗೆ ಸ್ವಾಸ್ಥ್ಯ ಸಂಕಲ್ಪದ ಅಂಗವಾಗಿ ಪ್ರತಿಜ್ಞಾವಿಧಿ ಭೋದಿಸಲಾಯಿತು.