ಮಡಿಕೇರಿ, ಡಿ. 20: ಮಂಗಳೂರು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ವತಿಯಿಂದ 1969-2019 ಸುವರ್ಣ ಮಹೋತ್ಸವ ವರ್ಷ ಪ್ರಯುಕ್ತ ತಾ. 21 ರಿಂದ 27 ರವರೆಗೆ ಬೆಟ್ಟಗೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ವಿಶೇಷ ಶಿಬಿರ ನಡೆಯಲಿದೆ.

ತಾ. 21 ರಂದು ಮಧ್ಯಾಹ್ನ 2.30 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ರಾ.ಸೇ.ಯೋ. ಪ್ರಾಂತೀಯ ನಿರ್ದೇಶಕ ಖಾದ್ರಿ ನರಸಿಂಹಯ್ಯ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪದನಿಮಿತ್ತ ಜಂಟಿ ಕಾರ್ಯದರ್ಶಿ ಡಾ.ಗಣನಾಥ್ ಶೆಟ್ಟಿ ಎಕ್ಕಾರು, ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಎ.ಎಂ.ಖಾನ್, ಕಾರ್ಯಕ್ರಮ ಸಂಯೋಜನಾಧಿಕಾರಿ ಪ್ರೊ.ವಿನಿತಾ ಕೆ., ಸ.ಪ್ರ.ದ. ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ.ಜೆನಿಫರ್ ಲೋಲಿಟ ಸಿ., ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ತಾ.ಪಂ.ಸದಸ್ಯ ಕೊಡಪಾಲ ಗಣಪತಿ, ಬೆಟ್ಟಗೇರಿ ವಿಎಸ್‍ಎಸ್‍ಎನ್ ಅಧ್ಯಕ್ಷ ತಳೂರು ಕಿಶೋರ್ ಕುಮಾರ್, ಬೆಟ್ಟಗೇರಿ ಗ್ರಾ.ಪಂ. ಅಧ್ಯಕ್ಷೆ ಬಿ.ಎಸ್.ಶಾಂತಿ, ಸ.ಮಾ.ಪ್ರಾ. ಶಾಲೆಯ ಮುಖ್ಯೋಪಾಧ್ಯಾಯಿನಿ ಪಿ.ಸೀತಮ್ಮ ಇತರರು ಪಾಲ್ಗೊಳ್ಳಲಿದ್ದಾರೆ.