ಪೆರಾಜೆ, ಡಿ. 20: ಇಲ್ಲಿಯ ಶ್ರೀ ಶಾಸ್ತಾವು ಕ್ಷೇತ್ರದ ನಾಗ ಸಾನಿಧ್ಯದಲ್ಲಿ ವೇದಮೂರ್ತಿ ಬ್ರಹ್ಮಶ್ರೀ ಉಚ್ಚಿಲತಾಯ ಪದ್ಮನಾಭ ತಂತ್ರಿಯವರ ಉಪಸ್ಥಿತಿಯಲ್ಲಿ ನಾಗ ಪುನರ್ ಪ್ರತಿಷ್ಠೆ ಕಾರ್ಯಕ್ರಮ ತಾ. 27 ಮತ್ತು 28 ರಂದು ಜರುಗಲಿದೆ.

ತಾ. 27ರ ರಾತ್ರಿ 7 ರಿಂದ ಪ್ರಾರ್ಥನೆ, ಪ್ರಸಾದ ಪರಿಗ್ರಹ ಪುಣ್ಯಾಹ, ಪ್ರಸಾದ ಸುದ್ದಿ, ವಾಸ್ತು ರಕ್ಷೋಘ್ನ ಹೋಮ, ವಾಸ್ತುಬಲಿ, ಶುಕ್ರವಾರ ಬೆಳಿಗ್ಗೆ ಗಣಪತಿ ಹವನ, ಬಿಂಬ ಶುದ್ಧಿ, ಪತನ ಶಾಂತಿ ಹೋಮ, ನಾಗಪ್ರತಿಷ್ಠೆ, ಸಾನಿಧ್ಯ ಕಲಶಾಭಿಷೇಕ, ಆಶ್ಲೇಷ ಬಲಿ, ಮಧ್ಯಾಹ್ನ ಗಂಟೆ 1 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಮಂತ್ರಾಕ್ಷತೆ ಜರುಗಲಿದೆ.