ನಾಪೆÇೀಕ್ಲು, ಡಿ. 19 : ಇತಿಹಾಸ ಪ್ರಸಿದ್ಧ, ಸತ್ಯ ಸಂಧತೆಯ ಶ್ರೀ ಮಕ್ಕಿ ಶಾಸ್ತ್ರವು ದೇವರ ಹಬ್ಬವು ವಿಜೃಂಭಣೆಯಿಂದ ನಡೆಯಿತು. ತಾ, 16 ರಂದು ದೇವರಿಗೆ ಹರಕೆ ನಾಯಿ ರೂಪ ಹಾಕುವ ಕಾರ್ಯಕ್ರಮದ ಮುಖಾಂತರ ಹಬ್ಬಕ್ಕೆ ಚಾಲನೆ ನೀಡಲಾಯಿತು.
ಬುಧವಾರ ದೇವಾಲಯದ ಆವರಣದಲ್ಲಿ ನಡೆದ ಎರಡು ತೆರೆಗಳೊಂದಿಗೆ ಉತ್ಸವ ಕೊನೆಗೊಂಡಿತು.ಮಕ್ಕಿ ಶಾಸ್ತಾವು ಸನ್ನಿಧಿಯಲ್ಲಿ ಬೆಳಗ್ಗಿನಿಂದಲೇ ವಿವಿಧ ಕೋಲಗಳು ಶಾಸ್ತಾವು ದೇವರಿಗೆ ಸೇವೆ ಸಲ್ಲಿಸಿದವು.ಬೆಳಿಗ್ಗೆ ಅಜ್ಜಪ್ಪ ಕೋಲ ಹಾಗೂ ಮಧ್ಯಾಹ್ನ ವಿಷ್ಣುಮೂರ್ತಿ ತೆರೆಗಳು ತಮ್ಮ ಸಾಂಪ್ರದಾಯಿಕ ವೇಷಭೂಷಣಗಳೊಂದಿಗೆ ಗಮನ ಸೆಳೆದವು. ಭಕ್ತರು ಅಧಿಕ ಸಂಖ್ಯೆಯಲ್ಲಿ ಉತ್ಸವದಲ್ಲಿ ಪಾಲ್ಗೊಂಡು ಕಾರ್ಯಕ್ರಮ ವೀಕ್ಷಿಸಿದರು. ಭಕ್ತರಿಂದ ದೇವರಿಗೆ ವಿವಿಧ ರೀತಿಯ ಹರಕೆಗಳನ್ನು ಸಲ್ಲಿಸಲಾಯಿತು. ಮಧ್ಯಾಹ್ನ ಅನ್ನದಾನ ಏರ್ಪಡಿಸಲಾಗಿತ್ತು. ಅಪರಾಹ್ನ ವಿಷ್ಣುಮೂರ್ತಿ ತೆರೆ ಮೇಲೇರಿಗೆ ಬೀಳುವ ದೃಶ್ಯ ಭಕ್ತರನ್ನು ರೋಮಾಂಚನಗೊಳಿಸಿತು.ಇದಕ್ಕೂ ಮೊದಲು ಮಂಗಳವಾರ ರಾತ್ರಿ ದೀಪಾರಾಧನೆ (ಅಂದಿಬೊಳಕ್) ನಡೆಯಿತು.ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಕುಟ್ಟಂಚೆಟ್ಟೀರ ಶ್ಯಾಂ ಬೋಪಣ್ಣ, ತಕ್ಕಮುಖ್ಯಸ್ಥ ಕೊಂಡೀರ ಪೊನ್ನಣ್ಣ ಉತ್ಸವದ ನೇತೃತ್ವ ವಹಿಸಿದ್ದರು. ಅರ್ಚಕ ಮಕ್ಕಿ ದಿವಾಕರ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. - ದುಗ್ಗಳ ಸದಾನಂದ