ಶ್ರೀಮಂಗಲ, ಡಿ. 21: ವೀರಾಜಪೇಟೆ ತಾಲೂಕು ಕೃಷಿಕ ಸಮಾಜ ಮತ್ತು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ತಾ. 23 ರಂದು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಭಾಂಗಣದಲ್ಲಿ ಪೂರ್ವಾಹ್ನ 11 ಗಂಟೆಗೆ ರೈತ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಪಟ್ರಪಂಡ ರಘು ನಾಣಯ್ಯ ವಹಿಸುವರು. ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕೃಷಿ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.