ಸಿದ್ದಾಪುರ,ಡಿ. 21: ಟ್ರ್ಯಾಕ್ಟರ್‍ನ ಟ್ರೈಲರ್ ಕೊಂಡಿ ಕಳಚಿಕೊಂಡು ಕಾರ್ಮಿಕನೋರ್ವ ಗಂಭೀರ ಗಾಯಗೊಂಡು ಸಾವನಪ್ಪಿರುವ ಘಟನೆ ಸಿದ್ದಾಪುರದಲ್ಲಿ ನಡೆದಿದೆ. ಸಿದ್ದಾಪುರದ ವೀರಾಜಪೇಟೆ ರಸ್ತೆಯಲ್ಲಿರುವ ಕೈರಾಸ್ ಎಸ್ಟೇಟ್‍ನಲ್ಲಿ ವಾಸವಾಗಿದ್ದ ಅರಳಪ್ಪ(58) ಎಂಬವರು ಸಿದ್ದಾಪುರದ ಮಡಿಕೇರಿ ರಸ್ತೆಯಲ್ಲಿರುವ ಚುಮ್ಮಿ ಪೂವಯ್ಯ ಎಂಬುವರಲ್ಲಿ ಕೆಲಸಕ್ಕೆ ತೆರಳಿದ್ದರು.
ಈ ಸಂದರ್ಭದಲ್ಲಿ ಟ್ರ್ಯಾಕ್ಟರ್‍ನ ಟ್ರೈಲರ್‍ನಲ್ಲಿ ಇಟ್ಟಿಗೆಗಳನ್ನು ಸಾಗಾಟ ಮಾಡುವ ಸಂದರ್ಭ ಆಕಸ್ಮಿಕವಾಗಿ ಟ್ರ್ಯಾಕ್ಟರ್‍ನ ಟ್ರೈಲರ್ ಕೊಂಡಿ ಕಳಚಿಕೊಂಡು ಕಾರ್ಮಿಕ ಅರಳಪ್ಪನಿಗೆ ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡಿತು. ಗಾಯಾಳುವನ್ನು ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅರಳಪ್ಪ ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್‍ನ ಚಾಲಕ ಕೂಡುಗದ್ದೆಯ ಚಂದ್ರಶೇಖರ್ ಎಂಬಾತನ ನಿರ್ಲಕ್ಷ್ಯತನದಿಂದ ಈ ಘಟನೆ ಸಂಭವಿಸಿದೆ ಎಂದು ಸಿದ್ದಾಪುರ ಪೊಲೀಸರು ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.