ಶನಿವಾರಸಂತೆ, ಡಿ. 21: ಪಟ್ಟಣದ ಶ್ರೀ ವಿಘ್ನೇಶ್ವರ ಬಾಲಿಕಾ ಪದವಿಪೂರ್ವ ಕಾಲೇಜು 2018ನೇ ಸಾಲಿನ ದ್ವಿತೀಯ ಪಿ.ಯು. ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಸಾಧನೆ ಮಾಡಿದ್ದು, ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಾಂಶುಪಾಲ ಟಿ.ಪಿ. ಶಿವಪ್ರಕಾಶ್ ರಾಜ್ಯಮಟ್ಟದ ಪುರಸ್ಕಾರ ಪ್ರಶಸ್ತಿ ಸ್ವೀಕರಿಸಿದರು.
ರಾಜ್ಯದ ಒಟ್ಟು 29 ಪದವಿಪೂರ್ವ ಕಾಲೇಜುಗಳು ಶೇ. 100 ಫಲಿತಾಂಶ ಸಾಧನೆ ಮಾಡಿದ್ದು, ಶನಿವಾರಸಂತೆಯ ಶ್ರೀ ವಿಘ್ನೇಶ್ವರ ಬಾಲಿಕಾ ಪದವಿಪೂರ್ವ ಕಾಲೇಜು ಅವುಗಳಲ್ಲಿ ಒಂದಾಗಿದೆ. ಪ್ರಶಸ್ತಿ ಪಡೆದ ಕೊಡಗು ಜಿಲ್ಲೆಯ ಏಕೈಕ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ ಸಹಭಾಗಿತ್ವದಲ್ಲಿ ಬೆಂಗಳೂರಿನ ಸೆಂಟ್ ಜೋಸೆಫ್ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಶಸ್ತಿ ವಿತರಿಸಿದರು.