ಶನಿವಾರಸಂತೆ, ಡಿ. 21: ಪಟ್ಟಣದ ಶ್ರೀರಾಮ ಮಂದಿರದಲ್ಲಿ ಹನುಮ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಶ್ರೀರಾಮ, ಸೀತಾ, ಲಕ್ಷ್ಮಣ ಮೂರ್ತಿಗಳೊಂದಿಗೆ ಹನುಮ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಮಂದಿರವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.

ಅರ್ಚಕ ನಾಗೇಶ್ ಭಟ್ ಪೂಜಾವಿಧಿಗಳನ್ನು ನೆರವೇರಿಸಿದರು. ಹನುಮ ದೇವರಿಗೆ ಅಭಿಷೇಕ, ಹೋಮ - ಹವನ ಮಾಡಿ, ಮಹಾಮಂಗಳಾರತಿ ಮಾಡಲಾಯಿತು. ಅನ್ನಸಂತರ್ಪಣೆ ನಡೆಯಿತು. ಸೇವಾ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.