ಮಡಿಕೇರಿ, ಡಿ. 22: ಸಂಪಾಜೆ ಸಂಯುಕ್ತ ಪದವಿಪೂರ್ವ ಕಾಲೇಜು ವಾರ್ಷಿಕೋತ್ಸವ ಮತ್ತು ಡಾ. ಕೀಲಾರು ಗೋಪಾಲ ಕೃಷ್ಣಯ್ಯ ಸ್ಮಾರಕ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ತಾ. 26 ರಂದು ಸಂಪಾಜೆ ಪದವಿಪೂರ್ವ ಕಾಲೇಜಿನ ನಿಸರ್ಗ ರಂಗ ವೇದಿಕೆಯಲ್ಲಿ ನಡೆಯಲಿದೆ. ಸಂಜೆ 5 ಗಂಟೆಗೆ ಡಾ. ಕೀಲಾರು ಗೋಪಾಲ ಕೃಷ್ಣಯ್ಯ ಸ್ಮಾರಕ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್, ಶಾಸಕ ಕೆ.ಜಿ. ಬೋಪಯ್ಯ, ವಸತಿ ಮತ್ತು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್, ವಿಧಾನಸಭಾ ಸದಸ್ಯ ಎಸ್. ಅಂಗಾರ, ಮಡಿಕೇರಿ ಪದವಿಪೂರ್ವ ಶಿಕ್ಷಣ ಇಲಾಖೆಯ ಜಿ. ಕೆಂಚಪ್ಪ, ಸಂಪಾಜೆ ಎಜುಕೇಶನ್ ಸೊಸೈಟಿಯ ನಿಕಟಪೂರ್ವ ಅಧ್ಯಕ್ಷ ಎನ್.ಎಸ್. ದೇವಿಪ್ರಸಾದ್, ಸಂಪಾಜೆ ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನದ ಅಧ್ಯಕ್ಷೆ ವಿಜಯಲಕ್ಷ್ಮಿ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ. ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಮೇಳದವರಿಂದ ಸಂಜೆ 6 ಗಂಟೆಯಿಂದ ಯಕ್ಷಗಾನ ಬಯಲಾಟ ನಡೆಯಲಿದೆ.