ಮಡಿಕೇರಿ, ಡಿ. 23: ಇಂದಿನ ಮೊಬೈಲ್ ಯುಗದಲ್ಲಿ ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನಗಳೊಂದಿಗೆ ಕಾಲವ್ಯಯಿಸದೆ ಕ್ರೀಡೆ, ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳುವಂತಾಗಬೇಕೆಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪಿ. ಹೇಳಿದರು.

ನಗರದ ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದ ಕ್ರೀಡಾ ದಿನಾಚರಣೆಯಲ್ಲಿ ವಿದ್ಯಾರ್ಥಿ ತಂಡಗಳ ಪಥಸಂಚಲನದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಇಂದಿನ ಆಧುನಿಕ ದಿನಗಳಲ್ಲಿ ಜೀವನ ಶೈಲಿಗೆ ತಕ್ಕಂತೆ ಮಕ್ಕಳಲ್ಲಿ ವಿದ್ಯುನ್ಮಾನ ಮಾಧ್ಯಮಗಳತ್ತ ಲಕ್ಷ್ಯ ಹೆಚ್ಚಾಗುತ್ತಿದೆ. ಹಿಂದಿನ ದಿನಗಳಂತೆ ಮಕ್ಕಳು ಕ್ರೀಡಾಚಟುವಟಿಕೆಗಳಿಂದ ವಿಮುಖರಾಗುತ್ತಿದ್ದಾರೆ. ನಗರ ಪ್ರದೇಶದ 6 ರಿಂದ 16 ವರ್ಷದ ವಿದ್ಯಾರ್ಥಿಗಳೂ ಕ್ರೀಡೆಗಳಲ್ಲಿ ಪಾಲ್ಗೊಳ್ಳುವದು ಕಡಮೆಯಾಗುತ್ತಿದೆ ಎಂದರು.

ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದ ಅಧ್ಯಕ್ಷ ಬಿ.ಕೆ. ಸುಬ್ಬಯ್ಯ ಮಾತನಾಡಿ, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಂಸ್ಥೆ ರೂಪಿಸುವ ನಿಟ್ಟಿನಲ್ಲಿ ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯ ಸಾಗಿ ಬಂದ ಹಾದಿಯ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಉಪಾಧ್ಯಕ್ಷ ಕೆ.ಪಿ. ಉತ್ತಪ್ಪ, ಭಾರತೀಯ ವಿದ್ಯಾಭವನ ಕೊಡಗು ಕೇಂದ್ರದ ಅಧ್ಯಕ್ಷ ಕೆ.ಎಸ್. ದೇವಯ್ಯ, ನಿರ್ದೇಶಕರಾದ ರಘು ಮಾದಪ್ಪ, ಬಾಲಾಜಿ ಕಶ್ಯಪ್, ಗುರುದತ್, ವಿದ್ಯಾಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾ ಹರೀಶ್, ಉಪಪ್ರಾಂಶುಪಾಲೆ ವನಿತಾ, ಶಾಲಾ ವ್ಯವಸ್ಥಾಪಕ ರವಿ, ವಿದ್ಯಾರ್ಥಿ ಪೆÇೀಷಕರು, ಶಿಕ್ಷಕ ವೃಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವಿವಿಧ ಕ್ರೀಡಾ ಸ್ಪರ್ಧೆಗಳೊಂದಿಗೆ ವಿದ್ಯಾರ್ಥಿಗಳ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳೂ ಗಮನ ಸೆಳೆದವು. ಅಂತೆಯೇ, ಕಾಲೂರಿನ ಸಂತ್ರಸ್ತ ಮಹಿಳೆಯರು ತಯಾರಿಸಿದ ವಿವಿಧ ಮಸಾಲೆ ಪದಾರ್ಥಗಳ ಮಳಿಗೆ ಮೆಚ್ಚುಗೆಗೆ ಕಾರಣವಾಯಿತು.