ಸೋಮವಾರಪೇಟೆ, ಡಿ. 24: ಸಮೀಪದ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯು ಕೂತಿ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದ್ದು, ಕೆಲವೊಂದು ಯೋಜನೆಗಳ ಜಾರಿಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಪ್ರಸಕ್ತ ಸಾಲಿನಲ್ಲಿ ಕೂತಿ ಗ್ರಾಮ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗಿದ್ದು, ಭೂಕುಸಿತದಿಂದ ಗ್ರಾಮದಲ್ಲಿ ಹೆಚ್ಚಿನ ಹಾನಿಯಾಗಿದೆ. 50 ಎಕರೆಯಷ್ಟು ಕಾಫಿ ತೋಟದಲ್ಲಿ ಭೂಕುಸಿತವಾಗಿದೆ. ಭತ್ತ, ಕಾಫಿ, ಕಾಳುಮೆಣಸು ಫಸಲು ಹಾನಿಯಾಗಿದ್ದರೂ ಗ್ರಾಮ ಪಂಚಾಯಿತಿಯಿಂದ ಸಮರ್ಪಕ ಸ್ಪಂದನೆ ದೊರೆತಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರದಿಂದ ವಿತರಣೆಯಾದ ಪಡಿತರವನ್ನು ಸಕಾಲದಲ್ಲಿ ವಿತರಣೆ ಸೋಮವಾರಪೇಟೆ, ಡಿ. 24: ಸಮೀಪದ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯು ಕೂತಿ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದ್ದು, ಕೆಲವೊಂದು ಯೋಜನೆಗಳ ಜಾರಿಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಪ್ರಸಕ್ತ ಸಾಲಿನಲ್ಲಿ ಕೂತಿ ಗ್ರಾಮ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗಿದ್ದು, ಭೂಕುಸಿತದಿಂದ ಗ್ರಾಮದಲ್ಲಿ ಹೆಚ್ಚಿನ ಹಾನಿಯಾಗಿದೆ. 50 ಎಕರೆಯಷ್ಟು ಕಾಫಿ ತೋಟದಲ್ಲಿ ಭೂಕುಸಿತವಾಗಿದೆ. ಭತ್ತ, ಕಾಫಿ, ಕಾಳುಮೆಣಸು ಫಸಲು ಹಾನಿಯಾಗಿದ್ದರೂ ಗ್ರಾಮ ಪಂಚಾಯಿತಿಯಿಂದ ಸಮರ್ಪಕ ಸ್ಪಂದನೆ ದೊರೆತಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರದಿಂದ ವಿತರಣೆಯಾದ ಪಡಿತರವನ್ನು ಸಕಾಲದಲ್ಲಿ ವಿತರಣೆ ಅನ್ಯಾಯವಾಗುತ್ತಿದೆ. 14ನೇ ಹಣಕಾಸು ಯೋಜನೆ, ನರೇಗಾ ಯೋಜನೆಯಡಿ ಅನೇಕ ಕಾಮಗಾರಿಗಳು ನಡೆದಿಲ್ಲ. ಪಂಚಾಯಿತಿಯ ಸದಸ್ಯರು ಸಮರ್ಪಕ ವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರುಗಳ ಸುರಿಮಳೆಗೈದರು.
ಕೂತಿ ಗ್ರಾಮವನ್ನು ಮಳೆಹಾನಿ ಪೀಡಿತ ಪ್ರದೇಶವೆಂದು ಘೋಷಣೆ ಮಾಡಿಲ್ಲ. ಕಂದಾಯ ಇಲಾಖೆಯಲ್ಲಿನ ಲಂಚದ ಹಾವಳಿಯಿಂದ ಬಡ ಕೃಷಿಕರು ಆಸ್ತಿ ಹಕ್ಕುಪತ್ರಗಳನ್ನು ಪಡೆಯಲು ಸಾಧ್ಯವಾಗದೆ, ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ತಮ್ಮ ಆಹವಾಲನ್ನು ಸ್ವೀಕರಿಸಲು ಸ್ಥಳಕ್ಕೆ ತಹಸೀಲ್ದಾರ್ ಆಗಮಿಸಬೇಕೆಂದು ಪಟ್ಟುಹಿಡಿದು ಧರಣಿ ಮುಂದುವರೆಸಿದರು.
ತಹಶೀಲ್ದಾರ್ ಭೇಟಿ: ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಮಹೇಶ್ ಅವರು, ಗ್ರಾಮಸ್ಥರ ಸಮಸ್ಯೆಯನ್ನು ಆಲಿಸಿದರು. ಕೂತಿ ಗ್ರಾಮದಲ್ಲಿ ಸಂಭವಿಸಿರುವ ಬೆಳೆಹಾನಿ ಹಾಗೂ ಭೂಕುಸಿತದ ಬಗ್ಗೆ ಪೂರ್ಣ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಗುವದು. ತಾಂತ್ರಿಕ ಸಮಸ್ಯೆಯಿಂದ ವಿಳಂಬವಾಗಿದೆ. ಮುಂದಿನ ಒಂದು ವಾರದಲ್ಲಿ ಹಾನಿಯ ವಿವರವನ್ನು ಸಲ್ಲಿಸ ಲಾಗುವದು. ಪಡಿತರವನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುವದು ಎಂದು ಭರವಸೆ ನೀಡಿದರು.
ಕೂತಿ ಗ್ರಾಮದ ಆಗಬೇಕಾದ ಮೂಲಭೂತ ಸೌಲಭ್ಯಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಪಟ್ಟಿಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿ.ಜೆ.ಭಾರತಿ ಅವರಿಗೆ ಸಲ್ಲಿಸಲಾಯಿತು. ಸೌಲಭ್ಯಗಳನ್ನು ಒದಗಿಸಿಕೊಡುವ ತಹಸೀಲ್ದಾರ್ ಅವರ ಭರವಸೆಯ ನಂತರ ಪ್ರತಿಭಟನೆಯನ್ನು ಹಿಂಪಡೆಯ ಲಾಯಿತು. ಪ್ರತಿಭಟನೆಯಲ್ಲಿ ಗ್ರಾಮದ ಹಿರಿಯರಾದ ಕೆ.ಸಿ.ಉದಯ ಕುಮಾರ್, ಶಿವರಾಜ್, ಪ್ರಸನ್ನ, ಕುಶಾಲಪ್ಪ, ದಿನೇಶ್ ಮತ್ತಿತರು ಭಾಗವಹಿಸಿದ್ದರು.