ಮಡಿಕೇರಿ, ಡಿ. 24: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇವರ ವತಿಯಿಂದ ಐಟಿಐ ಪಾಸಾದ ಅಭ್ಯರ್ಥಿಗಳಿಂದ ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಫಿಟ್ಟರ್, ಟರ್ನರ್, ಮೆಶಿನಿಸ್ಟ್, ಶೀಟ್ ಮೆಟಲ್ ವರ್ಕರ್, ಫೌಂಡ್ರಿಮ್ಯಾನ್, ಎಲೆಕ್ಟ್ರಿಷಿಯನ್, ವೆಲ್ಡರ್. ಈ ಟ್ರೇಡ್ಗಳಲ್ಲಿ ಐಟಿಐ ತೇರ್ಗಡೆ ಹೊಂದಿರುವಂತಹ ಅಭ್ಯರ್ಥಿಗಳು ತಿತಿತಿ.ಚಿಠಿಠಿಡಿeಟಿಣiಛಿeshiಠಿ.gov.iಟಿ ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ನೋಂದಾಯಿಸಿ, ನೋಂದಣಿ ಸಂಖ್ಯೆಯನ್ನು ನಿಗದಿತ ಅರ್ಜಿ ನಮೂನೆಯಲ್ಲಿ ನಮೂದಿಸಿ, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ, ಅಂತಿಮ ದಿನಾಂಕದೊಳಗೆ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ಮಡಿಕೇರಿ ಇಲ್ಲಿಗೆ ಸಲ್ಲಿಸುವದು.
ಲಗತ್ತಿಸಬೇಕಾದ ದಾಖಲೆಗಳು ಎಸ್.ಎಸ್.ಎಲ್.ಸಿ. ಅಂಕಪಟ್ಟಿಯ ಪ್ರತಿ. ಐಟಿಐ ಅಂಕಪಟ್ಟಿಯ ಪ್ರತಿ. ಜಾತಿ ಪ್ರಮಾಣ ಪತ್ರ, ಅಂಗವಿಕಲತೆಯ ಪ್ರಮಾಣಪತ್ರ, ಸೇನಾ ಪ್ರಮಾಣ ಪತ್ರದ ಪ್ರತಿ. ಆಧಾರ್ ಕಾರ್ಡಿನ ಪ್ರತಿ. ಎನ್ಸಿವಿಟಿ ಎಂಎಸ್ ಪೋರ್ಟಲ್ನ ನೋಂದಣಿ ಸಂಖ್ಯೆಯ ಪ್ರತಿ. ಅರ್ಜಿ ಸಲ್ಲಿಸಲು ತಾ. 28 ಕೊನೆಯ ದಿನವಾಗಿದೆ ಎಂದು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಮಾಧ್ಯಮ ತರಬೇತಿಗೆ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪತ್ರಿಕೋದ್ಯಮ ಪದವೀಧರರಿಗೆ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಗಳಲ್ಲಿ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿಯನ್ನು ಏಳು ತಿಂಗಳ ಕಾಲ ಕರ್ನಾಟಕ ಮಾಧ್ಯಮ ಅಕಾಡೆಮಿಯ ಮೂಲಕ ಏರ್ಪಡಿಸಲು ಆಯೋಜಿಸಲಾಗಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಒಬ್ಬ ಮತ್ತು ಪರಿಶಿಷ್ಟ ಪಂಗಡದ ಒಬ್ಬ ಒಟ್ಟು ಇಬ್ಬರು ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳಿಗೆ ಅವಕಾಶವಿದೆ. ಅರ್ಜಿಯನ್ನು ತಾ. 27 ರ ಸಂಜೆ 5 ಗಂಟೆಯೊಳಗೆ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ, ಇಲ್ಲ್ಲಿಗೆ ಸಲ್ಲಿಸಬೇಕು. ಅಭ್ಯರ್ಥಿಯು ಕರ್ನಾಟಕ ರಾಜ್ಯದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮ/ ವಿದ್ಯುನ್ಮಾನ ಮಾದ್ಯಮದಲ್ಲಿ ಸ್ನಾತಕೋತ್ತರ/ ಪದವಿ ಪಡೆದಿರಬೇಕು. ಹೆಚ್ಚಿನ ಮಾಹಿತಿಗೆ ಕಚೇರಿ ಸಮಯದಲ್ಲಿ 08272-228449 ನ್ನು ಸಂಪರ್ಕಿಸಬಹುದಾಗಿದೆ.
ಮಾತೃವಂದನಾ ಯೋಜನೆಗೆ
ಪ್ರಧಾನಮಂತ್ರಿ ಪ್ಯಾನ್ ಇಂಡಿಯಾ ಅಡಿಯಲ್ಲಿ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ ಎಂಬ ಹೊಸ ಯೋಜನೆಯನ್ನು ಘೋಷಿಸಿರುತ್ತಾರೆ. ಈ ಯೋಜನೆಯನ್ವಯ 1.1.2017ರ ನಂತರ ಮೊದಲ ಪ್ರಸವದ ಗರ್ಭಿಣಿ ಮಹಿಳೆಯರಿಗೆ ರೂ. 5 ಸಾವಿರ ಪ್ರೋತ್ಸಾಹ ಧನವನ್ನು ಮೂರು ಕಂತುಗಳಲ್ಲಿ ನೇರ ನಗದು ವರ್ಗಾವಣೆಯ ಮೂಲಕ ಫಲಾನುಭವಿಯ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವದು. ಸರ್ಕಾರಿ ಹಾಗೂ ಅರೆ ಸರ್ಕಾರಿ ಮಹಿಳಾ ನೌಕರರನ್ನು ಹೊರತುಪಡಿಸಿ ಉಳಿದ ಎಲ್ಲಾ ಮೊದಲ ಪ್ರಸವದ ಗರ್ಭಿಣಿ ಮಹಿಳೆಯರು ಈ ಸೌಲಭ್ಯವನ್ನು ಪಡೆಯಬಹುದಾಗಿದೆ. ನೋಂದಾವಣಿಗೆ ನಿಗದಿಪಡಿಸಿದ ಅರ್ಜಿ ನಮೂನೆಗಳು ಅಂಗನವಾಡಿ ಕೇಂದ್ರಗಳು ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ದೊರೆಯುತ್ತದೆ.
ಭರ್ತಿ ಮಾಡಿದ ಅರ್ಜಿಯೊಂದಿಗೆ ತಾಯಿ ಮತ್ತು ಶಿಶು ರಕ್ಷಣಾ ಕಾರ್ಡ್, ಫಲಾನುಭವಿಯ ಹಾಗೂ ಪತಿಯ ಆಧಾರ್ ಕಾರ್ಡ್ ಪ್ರತಿ ಹಾಗೂ ಫಲಾನುಭವಿಯ ಆಧಾರ ಲಿಂಕ್ಡ್ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ಸಂಬಂಧಿಸಿದ ಅಂಗನವಾಡಿ ಕೇಂದ್ರಗಳಿಗೆ ಸಲ್ಲಿಸಬಹುದಾಗಿದೆ ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಪ್ರೋತ್ಸಾಹ ಧನಕ್ಕೆ
2018-19ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹ ಧನ ಮಂಜೂರು ಮಾಡಲಾಗುತ್ತಿದ್ದು, ಪ್ರಥಮ ಪ್ರಯತ್ನದಲ್ಲಿ ಶೇ. 60-74.99 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ರೂ. 7 ಸಾವಿರಗಳನ್ನು ಮತ್ತು ಶೇ. 75 ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ರೂ. 15 ಸಾವಿರಗಳನ್ನು ಮಂಜೂರು ಮಾಡಲಾಗುತ್ತಿದೆ. ಈ ಪ್ರೋತ್ಸಾಹ ಧನವನ್ನು ಪಡೆಯಲು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆ ಹಾಗೂ ಇತರ ವಿವರಗಳನ್ನು ಇಲಾಖೆಯ ವೆಬ್ಸೈಟ್ ತಿತಿತಿ.ಣತಿ.ಞಚಿಡಿ.ಟಿiಛಿ.iಟಿ ನಲ್ಲಿ ಆನ್ಲೈನ್ ಮೂಲಕ ತಪ್ಪದೇ ನೋಂದಾಯಿಸಿಕೊಳ್ಳುವದು. ಆನ್ಲೈನ್ ಮೂಲಕ ನೋಂದಾಯಿಸಿಕೊಳ್ಳಲು ತಾ. 31 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ವಿದ್ಯಾರ್ಥಿಯು ರಾಜ್ಯದವರಾಗಿರಬೇಕು. ಪರಿಶಿಷ್ಟ ಪಂಗಡಕ್ಕೆ ಸೇರಿರಬೇಕು. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇ. 60 ರಿಂದ 74.99 ಅಂಕ ಮತ್ತು ಶೇ.75 ಕ್ಕಿಂತ ಹೆಚ್ಚು ಅಂಕ ಪಡೆದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲಾಗುವದು. ನೋಂದಣಿ ಮಾಡಲು ಬೇಕಾದ ಅಗತ್ಯ ದಾಖಲೆಗಳ ವಿವರ. ಎಸ್.ಎಸ್.ಎಲ್.ಸಿ. ನೋಂದಣಿ ಸಂಖ್ಯೆ, ಆಧಾರ್ ಕಾರ್ಡ್ನಲ್ಲಿರುವಂತೆ ನಿಮ್ಮ ಹೆಸರು ಮತ್ತು ಆಧಾರ್ ಸಂಖ್ಯೆ, ಜಾತಿ ಪ್ರಮಾಣ ಪತ್ರದ ಆರ್.ಡಿ. ಸಂಖ್ಯೆ, ಅರ್ಜಿದಾರರ ಪಾಸ್ಪೋರ್ಟ್ ಅಳತೆಯ ಪೋಟೋ, ಸ್ಕ್ಯಾನ್ ಮಾಡಲಾದ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರ, ಆಧಾರ್ ಲಿಂಕ್ ಮಾಡಲಾದ ಬ್ಯಾಂಕ್ ಖಾತೆ ವಿವರ.
ಹೆಚ್ಚಿನ ಮಾಹಿತಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯ, ನಿರ್ದೇಶಕರ ಕಚೇರಿ, 1ನೇ ಮಹಡಿ, ಲೋಟಸ್ ಟವರ್ಸ್, ರೇಸ್ಕೋರ್ಸ್ ರಸ್ತೆ, ಬೆಂಗಳೂರು ಇವರನ್ನು ಹಾಗೂ ದೂ. 080-22261787 ಇಲಾಖಾ ದೂರವಾಣಿ ವಿವರ 080-22261789 ಅಥವಾ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ-08274-261261, ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-223552, ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115 ಹಾಗೂ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ-08272-229983 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ತಿಳಿಸಿದ್ದಾರೆ.