ಕುಶಾಲನಗರ, ಡಿ. 24: ಕುಶಾಲನಗರ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಹುಣ್ಣಿಮೆ ಅಂಗವಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು. ಮುಖ್ಯ ಅರ್ಚಕ ಕೃಷ್ಣಮೂರ್ತಿ ಭಟ್ ನೇತೃತ್ವದ ತಂಡದಿಂದ ಪೂಜಾ ಕಾರ್ಯಕ್ರಮ ನಡೆಯಿತು.

ಕುಶಾಲನಗರ ಸುತ್ತಮುತ್ತಲಿನ ಭಕ್ತಾದಿಗಳು ಪೂಜೆಯಲ್ಲಿ ಪಾಲ್ಗೊಂಡಿದ್ದರು. ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಗಣಪತಿ, ಮಾಜಿ ಅಧ್ಯಕ್ಷ ಕೆ.ಆರ್. ಶಿವಾನಂದನ್, ಟ್ರಸ್ಟಿ ಮಣಿ ಮತ್ತಿತರರು ಇದ್ದರು.