ಶನಿವಾರಸಂತೆ, ಡಿ. 25: ಗುರು - ಗುರಿ ಇದ್ದರೆ ಮಾನವನ ಬದುಕು ಸಾರ್ಥಕವಾಗುವಂತೆ ಶಿಕ್ಷಣದಿಂದ ಜೀವನ ಪರಿಪೂರ್ಣ ಎನಿಸುತ್ತದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಜಯಮಾಲಾ ಅಭಿಪ್ರಾಯಪಟ್ಟರು.

ಸಮೀಪದ ಕೊಡ್ಲಿಪೇಟೆಯ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಆವರಣದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕøತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಯನ್ನು ಕಟ್ಟುವದು ಮುಖ್ಯವಲ್ಲ, ಬೆಳೆಸುವದು ಮುಖ್ಯ. ಎಲ್ಲಾ ದಾನಕ್ಕಿಂತ ವಿದ್ಯಾದಾನ ಶ್ರೇಷ್ಠವಾದುದು ಗ್ರಾಮೀಣ ಪ್ರದೇಶ ಬಡ ಮಕ್ಕಳಿಗೆ ಶಿಕ್ಷಣ ಕೊಡುವದು ಮಹತ್ವದ ಕಾರ್ಯ ಎಂದರು.

ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾಸಂಸ್ಥೆಗಳು ಪ್ರಗತಿ ಸಾಧಿಸಬೇಕು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ, ನಾಗರಿಕ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಹಾಗೂ ಚಲನಚಿತ್ರ ನಟ ಜೈ ಜಗದೀಶ್ ಮಾತನಾಡಿದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಹಾಗೂ ಅಂತರರಾಷ್ಟ್ರೀಯ ಹಾಕಿ ಆಟಗಾರ ವಿ.ಎಸ್. ವಿನಯ್ ಗೌರವ ಸ್ವೀಕರಿಸಿ ಮಾತನಾಡಿದರು. ಬೆಂಗಳೂರಿನ ಕಾನ್ಫಿಡೆಂಟ್ ಸ್ಟಾರ್ ಸಿಂಗರ್ಸ್ ಕಲಾವಿದರಾದ ಸಿದ್ದರಾಮ ಕೇಸಾಪುರ ಮತ್ತು ತಂಡದವರ ಸುಗಮ ಸಂಗೀತ ಹಾಗೂ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರದರ್ಶಿಸಿದ ಸಾಂಸ್ಕøತಿಕ ಕಾರ್ಯಕ್ರಮ ಸಾರ್ವಜನಿಕರ ಮನರಂಜಿಸಿತು. ವಿದ್ಯಾಸಂಸ್ಥೆ ಅಧ್ಯಕ್ಷ ಎಚ್.ಎನ್. ಚಂದ್ರಮೌಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಸ್ಥೆ ಗೌರವಧ್ಯಕ್ಷ ಎಸ್.ಎಸ್. ನಾಗರಾಜ್, ಉಪಾಧ್ಯಕ್ಷ ಶಂಭುಲಿಂಗಪ್ಪ, ಕಾರ್ಯದರ್ಶಿ ಕೆ.ಎಸ್. ಪರಮೇಶ್, ಖಜಾಂಚಿ ಡಾ. ಸಿ.ಆರ್. ಉದಯಕುಮಾರ್, ನಿರ್ದೇಶಕಿ ಸುಲೋಚನಾ ಗಿರೀಶ್ ನಿರ್ದೇಶಕರು, ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಪಿ. ಚಂದ್ರಕಲಾ ಅರುಣಾ ಉಪಸ್ಥಿತರಿದ್ದರು. ಅರುಣ ಚಂದ್ರಮೌಳಿ ಪ್ರಾರ್ಥಿಸಿದರು. ನಿರ್ದೇಶಕ ಕೆ.ಬಿ. ನಾಗರಾಜ್ ಸ್ವಾಗತಿಸಿ, ಶಿಕ್ಷಕ ಕಿರಣ್ ನಿರೂಪಿಸಿದರು.