ಶನಿವಾರಸಂತೆ, ಡಿ. 25: ಕೊಡ್ಲಿಪೇಟೆಯ ಕಲ್ಲಳ್ಳಿ ಬೀದಿಯ ನಿವಾಸಿ ಶ್ರೀನಿವಾಸ ಅವರ ಮನೆಯ ಬೀಗ ಮುರಿದು ಕಳ್ಳರು ಸಾವಿರಾರು ರೂ. ಮೌಲ್ಯದ ಚಿನ್ನಾಭರಣವನ್ನು ರೂ. 2 ಸಾವಿರ ನಗದನ್ನು ದೋಚಿದ್ದಾರೆ. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ವೃತ್ತ ನಿರೀಕ್ಷಕ ನಂಜುಡೇಗೌಡ, ಪೊಲೀಸ್ ಠಾಣಾಧಿಕಾರಿ ಹೆಚ್.ಪಿ. ಮರಿಸ್ವಾಮಿ, ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.