ವೀರಾಜಪೇಟೆ, ಡಿ. 25: ಅಂತರ್ರಾಷ್ಟ್ರೀಯ ಹಾಕಿ ಆಟಗಾರ ಮೇಕೇರಿರ ನಿತಿನ್ ತಿಮ್ಮಯ್ಯ ಅವರು ಮದ್ರೀರ ವಿಷ್ಮಾ ದೇಚಮ್ಮ ಅವರನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.
ಸಮೀಪದ ಬಾಳುಗೋಡುವಿನಲ್ಲಿರುವ ಕೊಡವ ಸಮಾಜದ ಒಕ್ಕೂಟಗಳ ಕಲ್ಯಾಣ ಮಂಟಪದಲ್ಲಿ ನಡೆದ ವಿವಾಹವು ಕೊಡವ ಸಂಪ್ರದಾಯದಂತೆ ನಡೆಯಿತು. ವಿವಾಹ ಸಮಾರಂಭದಲ್ಲಿ ಅಂತರರಾಷ್ಟ್ರೀಯ ಹಾಕಿ ಆಟಗಾರರಾದ ಚೇಂದಂಡ ನಿಕಿನ್ ತಿಮ್ಮಯ್ಯ, ನಿಕಿಲ್ ತಿಮ್ಮಯ್ಯ, ಏಕಲವ್ಯ ಪ್ರಶಸ್ತಿ ವಿಜೇತ ವಿನಯ್, ಅರ್ಜುನ್ ಪ್ರಶಸ್ತಿ ವಿಜೇತ ವಿ.ಆರ್. ರಘುನಾಥ್, ಮಾಜಿ ಆಟಗಾರ ಎ.ಬಿ. ಸುಬ್ಬಯ್ಯ, ಶಾಸಕ ಕೆ.ಜಿ. ಬೋಪಯ್ಯ ಮತ್ತಿತರರು ಭಾಗವಹಿಸಿದ್ದರು.