ಮಡಿಕೇರಿ, ಡಿ. 25: ಮೂರ್ನಾಡು ವಿದ್ಯಾಸಂಸ್ಥೆ ಹಾಗೂ ಜಾನಪದ ಪರಿಷತ್ ಮೂರ್ನಾಡು ಘಟಕದ ವತಿಯಿಂದ ತಾ. 27 ರಂದು (ನಾಳೆ) ಬೆಳಿಗ್ಗೆ 10.30 ಗಂಟೆಗೆ ಮೂರ್ನಾಡು ವಿದ್ಯಾಸಂಸ್ಥೆ ಕಾವೇರಿ ಸಭಾಂಗಣದಲ್ಲಿ ಖ್ಯಾತ ವಾಗ್ಮಿ, ಕನ್ನಡ ಪೂಜಾರಿ ಎಂದೇ ಖ್ಯಾತರಾದ ಹಿರೇಮಗಳೂರು ಕಣ್ಣನ್ ಅವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಅವರು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮೂರ್ನಾಡು ವಿದ್ಯಾಸಂಸ್ಥೆ ಅಧ್ಯಕ್ಷ ಬಾಚೆಟ್ಟಿರ ಜಿ. ಮಾದಪ್ಪ ವಹಿಸಲಿದ್ದಾರೆ. ಅತಿಥಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಗಾಯತ್ರಿ ಆಗಮಿಸಲಿದ್ದಾರೆ.