ಭಾಗಮಂಡಲ, ಡಿ. 26: ಚೆಯ್ಯಂಡಾಣೆಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ತೋಟಗಾರಿಕಾ ಇಲಾಖಾ ವತಿಯಿಂದ 2018 ಮತ್ತು 19ರ ಸಾಲಿನ ರಾಜ್ಯ ವಲಯ ಜೇನು ಸಾಕಾಣಿಕೆ ಯೋಜನೆಯಡಿ ಜೇನು ಕೃಷಿಯ ಬಗ್ಗೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.
ಜಿಲ್ಲಾ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಚೆಯ್ಯಂಡಾಣೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬೇಬಿ ಶಿವಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯಿತಿ ಸದಸ್ಯೆ ಉಮಾಪ್ರಭು, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರತೀಶ್ಕುಮಾರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸೀತಾರಾಮ, ತೋಟಗಾರಿಕೆ ಉಪನಿರ್ದೇಶಕ ಕೆ.ಎಸ್. ಚಂದ್ರಶೇಖರ್ ಉಪಸ್ಥಿತರಿದ್ದರು. ಚೇಲಾವರ ಗ್ರಾಮದ ಪ್ರಗತಿಪರ ಜೇನು ಕೃಷಿಕ ನಂದಕುಮಾರ್, ಜೇನು ಕೃಷಿ ಪ್ರದರ್ಶಕ ಬಿ.ಡಿ. ವಸಂತ್ ತಾಂತ್ರಿಕ ಮಾಹಿತಿ ನೀಡಿದರು.