ಪಿ.ಎಸ್.ಮಚ್ಚಾಡೋ, ಪೌರಾಯುಕ್ತ ಎಂ.ಎಲ್.ರಮೇಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಟಿ.ದರ್ಶನ್, ರಂಗ ರೂಪಕ ನಾಟಕ ಪ್ರದರ್ಶನ ಸಂಘಟP ಸಜನ್ ಮಂದಣ್ಣ ಇತರರು ಪಾಲ್ಗೊಳ್ಳಲಿದ್ದಾರೆ.
ಗೃಹರಕ್ಷಕರ ವೃತ್ತಿಪರ ಮತ್ತು ಕ್ರೀಡಾಕೂಟ
ಗೃಹ ರಕ್ಷಕ ದಳದ ವತಿಯಿಂದ 2018-19ನೇ ಜಿಲ್ಲಾ ಮಟ್ಟದ ಗೃಹರಕ್ಷಕರ ವೃತ್ತಿಪರ ಮತ್ತು ಕ್ರೀಡಾಕೂಟವು ಡಿಸೆಂಬರ್, 27 ಮತ್ತು 28 ರಂದು ನಗರದ ಡಿ.ಎ.ಆರ್ ಮೈದಾನದಲ್ಲಿ ನಡೆಯಲಿದೆ.
ತಾ. 27 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಪೊಲೀಸ್ ಉಪ ಅಧೀಕ್ಷಕರು ಹಾಗೂ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಕೆ.ಎಸ್.ಸುಂದರ್‍ರಾಜ್, ವೀರಾಜಪೇಟೆ ಪೊಲೀಸ್ ಉಪಅಧೀಕ್ಷಕ ನಾಗಪ್ಪ, ನಗರಸಭೆ ಆಯುಕ್ತರಾದ ಎಂ.ಎಲ್.ರಮೇಶ್ ಇತರರು ಪಾಲ್ಗೊಳ್ಳಲಿದ್ದಾರೆ.
ತಾ. 28 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಮಟ್ಟದ ಗೃಹರಕ್ಷಕರ ವೃತ್ತಿಪರ ಮತ್ತು ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪಿ, ಮಡಿಕೇರಿ ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಕೆ.ಎಸ್.ಸುಂದರ್‍ರಾಜ್ ಇತರರು ಪಾಲ್ಘೊಳ್ಳಲಿದ್ದಾರೆ.
ತ್ರೈಮಾಸಿಕ ಕೆ.ಡಿ.ಪಿ. ಸಭೆ
ಪ್ರಸಕ್ತ (2018-19) ಸಾಲಿನ ನವೆಂಬರ್ ಅಂತ್ಯದ ವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ತ್ರೈಮಾಸಿಕ ಸಭೆಯು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್ ಅವರ ಅಧ್ಯಕ್ಷತೆಯಲ್ಲಿ ತಾ. 27 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಒ ಲಕ್ಷ್ಮಿಪ್ರಿಯ ತಿಳಿಸಿದ್ದಾರೆ.