ಶನಿವಾರಸಂತೆ, ಡಿ. 26: ಪಟ್ಟಣದ ವಿಘ್ನೇಶ್ವರ ಬಾಲಕಿಯರ ಕಾಲೇಜಿನಲ್ಲಿ ಕಾನೂನು ಸೇವಾ ಪ್ರಾಧಿಕಾರ ರಾಜ್ಯ ಮತ್ತು ತಾಲೂಕು ಘಟಕ ಹಾಗೂ ಮಾನವ ಹಕ್ಕು ಭ್ರಷ್ಟಾಚಾರ ವಿರೋಧಿ ಸಂಸ್ಥೆ ವತಿಯಿಂದ ಕಾನೂನು ಅರಿವು ಕಾರ್ಯಕ್ರಮ ತಾ. 27 ರಂದು (ಇಂದು) ಬೆಳಿಗ್ಗೆ 10.30ಕ್ಕೆ ನಡೆಯಲಿದೆ.
ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶ ನೂರುನ್ನೀಸಾ ಕಾರ್ಯಕ್ರಮ ಉದ್ಘಾಟಿಸುವರು. ಕಾಲೇಜು ಪ್ರಾಂಶುಪಾಲ ಶಿವಪ್ರಕಾಶ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ತಾಲೂಕು ಕಿರಿಯ ಸಿವಿಲ್ ನ್ಯಾಯಾಧೀಶ ಭರತ್ ಕುಮಾರ್, ಜಿಲ್ಲಾ ಭ್ರಷ್ಟಾಚಾರ ನಿಗ್ರಹದಳ ಉಪ ಅಧೀಕ್ಷಕ ಪೂರ್ಣಚಂದ್ರ ತೇಜಸ್ವಿ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ, ವಕೀಲ ಪಿ.ಕೆ. ಗಣಪತಿ, ಮಾನವ ಹಕ್ಕು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ತಾಲೂಕು ಅಧ್ಯಕ್ಷ ಪಿ. ಮಧು ಹಾಗೂ ಪಿಎಸ್‍ಐ ಎಚ್.ಎಂ. ಮರಿಸ್ವಾಮಿ ಪಾಲ್ಗೊಳ್ಳುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.