ಶನಿವಾರಸಂತೆ, ಡಿ. 26: ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಖ್ಯಾತೆ ಗ್ರಾಮದ ನಿವಾಸಿ ಕೆ.ಎಂ. ಲೋಕೇಶ್ ಎಂಬಾತ ತನ್ನ ಮನೆಯ ಹಿಂಬದಿ ಕಾಫಿ ತೋಟದಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ ಕಾಯಿಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆ ಕೊಡ್ಲಿಪೇಟೆ ಪೊಲೀಸ್ ಉಪ ಠಾಣೆಯ ಸಹಾಯಕ ಠಾಣಾಧಿಕಾರಿ ಹೆಚ್.ಎಂ. ಗೋವಿಂದ್ ಹಾಗೂ ಸಿಬ್ಬಂದಿ ಧಾಳಿ ನಡೆಸಿ ಪ್ರಕರಣ ದಾಖಲಿಸಿದ್ದು, ಆರೋಪಿ ಪರಾರಿಯಾಗಿದ್ದಾನೆ.