ಕುಶಾಲನಗರ, ಡಿ. 26: ಕುಶಾಲನಗರ ಒಕ್ಕಲಿಗ ಯುವ ವೇದಿಕೆ ಆಶ್ರಯದಲ್ಲಿ ಜಿಲ್ಲಾಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ ನೀಡಲಾಯಿತು. ಸ್ಥಳೀಯ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಪಂದ್ಯಾಟಕ್ಕೆ ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಭುವನೇಂದ್ರ ಚಾಲನೆ ನೀಡಿದರು. ಜಿಲ್ಲೆಯಾದ್ಯಂತ ವಿವಿಧೆಡೆಗಳ ಒಟ್ಟು 14 ತಂಡಗಳು ಪಂದ್ಯಾಟದಲ್ಲಿ ಪಾಲ್ಗೊಂಡಿದ್ದವು.

ಈ ಸಂದರ್ಭ ವೇದಿಕೆಯ ವೀರಾಜಪೇಟೆ ತಾಲೂಕು ಅಧ್ಯಕ್ಷ ಮಹೇಶ್, ಒಕ್ಕಲಿಗ ಸಂಘದ ಸೋಮವಾರಪೇಟೆ ತಾಲೂಕು ಅಧ್ಯಕ್ಷ ದೀಪಕ್, ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್, ಯುವ ವೇದಿಕೆ ಕುಶಾಲನಗರ ಘಟಕದ ಅಧ್ಯಕ್ಷ ಎಂ.ಡಿ. ಕೃಷ್ಣಪ್ಪ ಮತ್ತಿತರರು ಇದ್ದರು.

ಪಂದ್ಯಾಟದ ತೀರ್ಪುಗಾರರಾಗಿ ಮಣಿ ಮತ್ತು ಚೇತನ್ ಕಾರ್ಯನಿರ್ವಹಿಸಿದರು.