ಸೋಮವಾರಪೇಟೆ, ಡಿ. 26: ಇಲ್ಲಿನ ಶ್ರೀ ಮುತ್ತಪ್ಪಸ್ವಾಮಿ ಹಾಗೂ ಅಯ್ಯಪ್ಪಸ್ವಾಮಿ ದೇವಾಲಯ ಸಮಿತಿಯ ವಾರ್ಷಿಕ ಮಹಾಸಭೆ ದೇವಾಲಯ ಸಮಿತಿ ಅಧ್ಯಕ್ಷ ಎನ್.ಡಿ. ವಿನೋದ್ ಅಧ್ಯಕ್ಷತೆಯಲ್ಲಿ ದೇವಾಲಯ ಆವರಣದಲ್ಲಿ ನಡೆಯಿತು. ದೇವಾಲಯದ ಅಭಿವೃದ್ಧಿ ಕಾಮಗಾರಿಗಳಿಗೆ ದಾನಿಗಳು ಹಾಗೂ ಜನಪ್ರತಿನಿಧಿಗಳ ಸಹಕಾರವನ್ನು ಶ್ಲಾಘಿಸಲಾಯಿತು. ಕಳೆದ ಸಾಲಿನ ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರಗಳನ್ನು ಮಂಡಿಸಿ, ಅನುಮೋದನೆ ಪಡೆಯಲಾಯಿತು.
ವೇದಿಕೆಯಲ್ಲಿ ಸಮಿತಿ ಗೌರವಾಧ್ಯಕ್ಷ ಎನ್.ಜಿ. ಜನಾರ್ಧನ್, ಉಪಾಧ್ಯಕ್ಷ ವೇಲಾಯುಧನ್, ಪ್ರಧಾನ ಕಾರ್ಯದರ್ಶಿ ಎನ್.ಟಿ. ಪ್ರಸನ್ನ ನಾಯರ್, ಸಹ ಕಾರ್ಯದರ್ಶಿ ಎಂ.ಕೆ. ಅಶೋಕ್, ಖಜಾಂಚಿ ಟಿ.ಸಿ. ಅಶೋಕ್ ಇದ್ದರು.
ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಎನ್.ಡಿ. ವಿನೋದ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎನ್.ಟಿ. ಪ್ರಸನ್ನನಾಯರ್ ಪುನರಾಯ್ಕೆ ಗೊಂಡರು. ಸಮಿತಿಯ ಗೌರವಾಧ್ಯಕ್ಷರಾಗಿ ಎನ್.ಜಿ. ಜನಾರ್ಧನ್, ಉಪಾಧ್ಯಕ್ಷರಾಗಿ ಪಿ.ಕೆ. ರಾಜನ್, ಸಹಕಾರ್ಯದರ್ಶಿಯಾಗಿ ಎಂ.ಕೆ. ಅಶೋಕ್, ಖಜಾಂಚಿಯಾಗಿ ಕೆ.ಬಿ. ಸುದೀಶ್ ಹಾಗೂ ನಿರ್ದೇಶಕರುಗಳಾಗಿ 10 ಮಂದಿ ಸದಸ್ಯರನ್ನು ನೇಮಕ ಮಾಡಲಾಯಿತು.