ಮಡಿಕೇರಿ, ಡಿ. 26: ಮುಂದಿನ ತಿಂಗಳಲ್ಲಿ ಜಿಲ್ಲೆಯ ಗಡಿಭಾಗ ಕಣಿವೆಯಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಏರ್ಪಡಿಸಲಾಗಿರುವ ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ ಅಂಗವಾಗಿ ಪೂರ್ವಭಾವಿ ಸಭೆ ಕ.ಸಾ.ಪ ಕಚೇರಿಯಲ್ಲಿ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಸಮ್ಮೇಳನದ ರೂಪುರೇಷೆ, ಸಮ್ಮೇಳನಾಧ್ಯಕ್ಷರ ಆಯ್ಕೆ ಸಂಬಂಧ ಚರ್ಚೆ ನಡೆಸಲಾಯಿತು. ಕವಿಗೋಷ್ಠಿ ಹಾಗೂ ವಿಚಾರಗೋಷ್ಠಿ ಹಮ್ಮಿಕೊಳ್ಳುವ ಬಗ್ಗೆ, ಗೋಷ್ಠಿಗೆ ಅಧ್ಯಕ್ಷರುಗಳು, ಉಪನ್ಯಾಸಕರನ್ನು ಯಾವ ಮಾನದಂಡದ ಅಧಾರದಲ್ಲಿ ಆಯ್ಕೆ ಮಾಡಬೇಕೆಂಬ ಬಗ್ಗೆ ಚರ್ಚಿಸಲಾಯಿತು. ಸಾಂಸ್ಕøತಿಕ ಕಾರ್ಯಕ್ರಮ, ಸಮ್ಮೇಳನಾಧ್ಯಕ್ಷರ ಮೆರವಣಿಗೆ ಹಮ್ಮಿಕೊಳ್ಳುವ ಬಗ್ಗೆ ತೀರ್ಮಾನಿಸಲಾಯಿತು. ಸಮ್ಮೇಳಾ ಧ್ಯಕ್ಷರ ಆಯ್ಕೆ ಕುರಿತಂತೆ ಈ ಹಿಂದಿನ ಸಾಹಿತ್ಯ ಸಮ್ಮೇಳನಗಳಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿರುವವರನ್ನು ಹೊರತು ಪಡಿಸಿ ಇನ್ನುಳಿದವರನ್ನು ಆದ್ಯತೆ ಮೇರೆ ಆಯ್ಕೆ ಮಾಡಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು.
ಸಮ್ಮೇಳನ ಸಮಿತಿ ಸಂಚಾಲಕಿ, ಹಿರಿಯ ಸಾಹಿತಿ ಮಂಡೇಪಂಡ ಗೀತಾಮಂದಣ್ಣ, ಸದಸ್ಯರುಗಳಾದ ಬಡಕಡಮ್ಮಂಡ ಕಸ್ತೂರಿ ಗೋವಿಂದಮ್ಮಯ್ಯ, ಡಾ. ಕೋರನ ಸರಸ್ವತಿ, ರಂಜಿತಾ ಕಾರ್ಯಪ್ಪ, ಗೌರಮ್ಮ ಮಾದಮ್ಮಯ್ಯ, ಕ.ಸಾ.ಪ ಮಡಿಕೇರಿ ತಾಲೂಕು ಅಧ್ಯಕ್ಷ ಕುಡೆಕಲ್ ಸಂತೋಷ್, ಜಿಲ್ಲಾ ನಿರ್ದೇಶಕ ಕೋಡಿ ಚಂದ್ರಶೇಖರ್ ಅವರುಗಳು ಪಾಲ್ಗೊಂಡಿದ್ದರು.