ಸೋಮವಾರಪೇಟೆ, ಡಿ. 26: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಪೊಲೀಸ್ ಇಲಾಖೆ ಇವುಗಳ ಸಹಯೋಗದಲ್ಲಿ, ಇಲ್ಲಿನ ಸಾಂದೀಪನಿ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಮತ್ತು ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮಾರ್ಷಲ್ ಲೋಬೋ ವಹಿಸಿದ್ದರು. ಪೊಲೀಸ್ ಠಾಣಾಧಿಕಾರಿ ಶಿವಶಂಕರ್ ಕಾರ್ಯಕ್ರಮ ಉದ್ಘಾಟಿಸಿ, ಅಪರಾಧ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳೂ ಸಹ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದರು.
ಸ್ವಾಸ್ಥ್ಯ ಕಾಪಾಡುವ ಬಗ್ಗೆ ಹಳೆಗೋಟೆ ಸರ್ಕಾರಿ ಶಾಲಾ ಶಿಕ್ಷಕ ರಮೇಶ್ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ಸಮಿತಿ ಮಾಜಿ ಅಧ್ಯಕ್ಷ ಪ್ರಮೋದ್, ಪ.ಪಂ. ಸದಸ್ಯೆ ನಳಿನಿ ಗಣೇಶ್, ಪ್ರಮುಖರಾದ ಸೋಮೇಶ್, ಯೋಜನಾಧಿಕಾರಿ ವೈ.ಪ್ರಕಾಶ್, ಒಕ್ಕೂಟದ ಅಧ್ಯಕ್ಷೆ ನಾಗಮ್ಮ, ಸೇವಾ ಪ್ರತಿನಿಧಿ ರುಬೀನಾ ಸೇರಿದಂತೆ ಇತರರು ಉಪಸ್ಥಿತರಿದ್ದರು.