ನಾಪೆÇೀಕ್ಲು, ಡಿ. 28: ಸರಕಾರಿ ಶಾಲೆಗಳು ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿರುವ ಕಾಲಘಟ್ಟದಲ್ಲಿ ನಾಪೆÇೀಕ್ಲು ಚೆರಿಯಪರಂಬು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಹೆಚ್ಚಿನ ಮಕ್ಕಳು ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ಅವರಿಗೆ ಬೇಕಾದ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಸರಕಾರದಿಂದ ಒದಗಿಸಲು ಕ್ರಮಕೈಗೊಳ್ಳಲಾಗುವದು ಎಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಹೇಳಿದರು.

ಚೆರಿಯಪರಂಬು ಶಾಲೆಯಲ್ಲಿ ನಿರ್ಮಿಸಲಾದ ನೂತನ ಶಾಲಾ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಾಡಿನ ಹಿರಿಯರು ಶೈಕ್ಷಣಿಕಾಭಿವೃದ್ಧಿಗೆ ಸ್ಥಳದಾನ ನೀಡಿ ಆರಂಭಿಸಿದ ಬಹುತೇಕ ವಿದ್ಯಾಸಂಸ್ಥೆಗಳು ಕೊಡಗಿನಲ್ಲಿದೆ. ಆದರೆ ವಿದ್ಯಾರ್ಥಿಗಳ ಕೊರತೆಯಿಂದ ಇಂದು ಇಂತಹ ಶಾಲೆಗಳು ಮುಚ್ಚುವ ಪರಿಸ್ಥಿತಿ ಬಂದೊದಗಿದೆ. ಎಲ್ಲ ಪೆÇೀಷಕರು, ಸಾರ್ವಜನಿಕರು ಈ ಶಾಲೆಗಳನ್ನು ಉಳಿಸಿಕೊಳ್ಳುವತ್ತ ಶ್ರಮ ವಹಿಸಬೇಕು ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ಮಾತನಾಡಿ ಸರಕಾರ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಅನುಕೂಲ ಕಲ್ಪಿಸುತ್ತಿದೆ. ಎಲ್ಲಾ ಪೆÇೀಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಕಳುಹಿಸುವದರ ಮೂಲಕ ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಬ್ದುಲ್ ಕರೀಂ ವಹಿಸಿದ್ದರು. ವೇದಿಕೆಯಲ್ಲಿ ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ಮಡಿಕೇರಿ ಕೃಷಿ ಮಾರುಕಟ್ಟೆ ಸಮಿತಿ ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಮುಖ್ಯ ಶಿಕ್ಷಕಿ ಪಾರ್ವತಿ, ಸಿ.ಎಂ. ಉಸ್ಮಾನ್, ಗ್ರಾಮಸ್ಥರು, ಶಿಕ್ಷಕ ವೃಂದ ಹಾಜರಿದ್ದರು.

ಈ ಸಂದರ್ಭದಲ್ಲಿ ಶಾಲೆಗೆ ಸ್ಥಳದಾನ ನೀಡಿದ ಮೊಯೈದಿನ್ ಹಾಜಿ, ಶಿಕ್ಷಕ ಸುಕುಮಾರ್ ಅವರನ್ನು ಸನ್ಮಾನಿಸಲಾಯಿತು.