ತಾ.ಪಂ. ಕೆಡಿಪಿ ಸಭೆ

ಮಡಿಕೇರಿ, ಡಿ. 27: ವೀರಾಜಪೇಟೆ ತಾಲೂಕು ಪಂಚಾಯಿತಿ ಸಭೆ ತಾ. 28 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.

ಗ್ರಾಹಕರ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವೇದಿಕೆ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಕುಶಾಲನಗರ ಆಶ್ರಯದಲ್ಲಿ ತಾ. 28 ರಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿ ಕಾವೇರಿ ಕಲಾಕ್ಷೇತ್ರದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ನಡೆಯಲಿದೆ.

ಗಣಕಯಂತ್ರ ವಿತರಣೆ

ಸರ್ಕಾರಿ ಪದವಿಪೂರ್ವ ಕಾಲೇಜು ವತಿಯಿಂದ ತಾ. 28 ರಂದು ಮಧ್ಯಾಹ್ನ 1.30 ಗಂಟೆಗೆ ನಗರದ ಜೂನಿಯರ್ ಕಾಲೇಜು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಸಭಾಂಗಣದಲ್ಲಿ ಕಾರ್ಪೋರೇಷನ್ ಬ್ಯಾಂಕ್ ವತಿಯಿಂದ ಗಣಕಯಂತ್ರ ವಿತರಣಾ ಕಾರ್ಯಕ್ರಮ ನಡೆಯಲಿದೆ.

ಕ್ರೀಡಾಕೂಟ ಸಮಾರೋಪ

ಗೃಹ ರಕ್ಷಕ ದಳದ ವತಿಯಿಂದ ಜಿಲ್ಲಾಮಟ್ಟದ ವೃತ್ತಿಪರ ಮತ್ತು ಕ್ರೀಡಾಕೂಟದ ಸಮಾರೋಪ ಸಮಾರಂಭ ತಾ. 28 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಡಿ.ಎ.ಆರ್. ಮೈದಾನದಲ್ಲಿ ನಡೆಯಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪಿ., ಮಡಿಕೇರಿ ಉಪ ವಿಭಾಗಾಧಿಕಾರಿ ಟಿ. ಜವರೇಗೌಡ, ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟ ಕೆ.ಎಸ್. ಸುಂದರ್‍ರಾಜ್ ಇತರರು ಪಾಲ್ಗೊಳ್ಳಲಿದ್ದಾರೆ.