ಮಡಿಕೇರಿ, ಡಿ.28 : ಭೂಮಿ ಮತ್ತು ನಿವೇಶನದ ಹಕ್ಕು, ಆದಿವಾಸಿ ಬುಡಕಟ್ಟು ಜನರ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ತಾ. 29 ರಂದು (ಇಂದು) ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗುವದೆಂದು ಸಮಿತಿಯ ಜಿಲ್ಲಾ ಕಾರ್ಯದರ್ಶಿ ವೈ.ಕೆ.ಗಣೇಶ್ ತಿಳಿಸಿದ್ದಾರೆ.ಬೆಳಿಗ್ಗೆ 11.30 ಗಂಟೆಗೆ ನಗರದ ಫೀ.ಮಾ. ಕಾರ್ಯಪ್ಪ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವದು ಎಂದು ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.