ಮಡಿಕೇರಿ, ಡಿ. 28: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಮಾದಾಪುರ ಕೊಡವ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ತಾ. 29 ರಂದು ಮಾದಾಪುರ ಕೊಡವ ಸಮಾಜದಲ್ಲಿ ಏಳ್‍ನಾಡ್‍ರ ಸಾಂಸ್ಕøತಿಕ ಸಂಗಮ ಕಾರ್ಯಕ್ರಮ ನಡೆಯಲಿದೆ.
ಬೆಳಿಗ್ಗೆ 9 ಗಂಟೆಗೆ ಮೆರವಣಿಗೆ, ನಂತರ ಬೆಳಿಗ್ಗೆ 10.30 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಶೇಷಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಜಯಮಾಲಾ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪೆಮ್ಮಂಡ ಕೆ. ಪೊನ್ನಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್, ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ವೀಣಾ ಅಚ್ಚಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.