ಸೋಮವಾರಪೇಟೆ, ಡಿ. 28: ಸಮೀಪದ ಮಾದಾಪುರ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ 57ನೇ ವಾರ್ಷಿಕೋತ್ಸವ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮೇಜರ್ ಬಿ.ಎ. ನಂಜಪ್ಪ ಮಾತನಾಡಿ, ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಕೇಳುವಂತಹ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಜಾಗೃತ ಮನಸ್ಸನ್ನು ಹೊಂದಿರಬೇಕು. ಮನಸ್ಸನ್ನು ಹಿಡಿತದಲ್ಲಿಟ್ಟುಕೊಂಡಾಗ ಮಾತ್ರ ಜೀವನದಲ್ಲಿ ಯಶಸ್ಸಿನ ಶಿಖರವೇರಬಹುದು ಎಂದು ಕಿವಿಮಾತು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಅಧ್ಯಕ್ಷ ಕರ್ನಲ್ ಬಿ.ಜಿ.ವಿ. ಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ಪ್ರಾಂಶುಪಾಲರಾದ ಸಿ.ಜಿ. ಮಂದಪ್ಪ, ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕಾಲೇಜಿನ ಎನ್.ಸಿ.ಸಿ. ವಿದ್ಯಾರ್ಥಿಗಳಿಂದ ಸಾಮೂಹಿಕ ಕವಾಯತ್ತು ಪ್ರದರ್ಶನ ನÀಡೆಯಿತು.